ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿ ಕಚೇರಿಯೊಳಗೆ ಕುಸಿದು ಬಿದ್ದು ಸಾವು
ಬಂಟ್ವಾಳ: ರಾತ್ರಿ ಸಮಯದಲ್ಲಿ ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ವೀರಕಂಬಗ್ರಾಮದ ಮಜ್ಜೋನಿ ದಿವಂಗತ ಕೃಷ್ಣಪ್ಪ ಮೂಲ್ಯರ ಪುತ್ರ 45ವರ್ಷ ಪ್ರಾಯದ ಜಯರಾಮ ಮೂಲ್ಯ ಮೃತಪಟ್ಟವರಾಗಿದ್ದಾರೆ. ಅವರು ಕಳೆದ ಸುಮಾರು 30 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನವಂಬರ್ 29ರಂದು ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಜೆ ವೇಳೆ ಇವರಿಗೆ ತಲೆಸುತ್ತು ಬರುವ ವಿಚಾರ ಇಲಾಖೆಯ ಜೊತೆ ಕೆಲಸಗಾರರಲ್ಲಿ ಹೇಳಿಕೊಂಡಿದ್ದರು […]













