November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಭಕ್ತಿ ಪರಂಪರೆ ಬೆಳಗಿಸಿದ ಧೀಮಂತ ವ್ಯಕ್ತಿ ಕನಕದಾಸರು

ದಾಸ ಪರಂಪರೆಗೆ ವಿಶೇಷ ಕೊಡುಗೆಯನ್ನು ಕೊಟ್ಟು ಇಂದು ಭಕ್ತಿ ಪಂಥದ ಪರಂಪರೆಯನ್ನು ಬೆಳಗಿಸಲು ಶ್ರಮಿಸಿದ ಧೀಮಂತ ವ್ಯಕ್ತಿ ಕನಕದಾಸರು ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಹೇಳಿದರು. ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯೋಜನೆಯಲ್ಲಿ ಮಂಗಳೂರು ಸರಕಾರಿ ನೌಕರರ ಸಂಘದ ನಂದಿನಿ ಸಭಾಭವನದಲ್ಲಿ ನಡೆದ ಕನಕ ಜಯಂತಿ ಆಚರಣೆ  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದಾಸ ಸಾಹಿತ್ಯ ದಾಸ ಪದಗಳ ಮುಖಿನ ನಮ್ಮಲ್ಲಿ ಭಕ್ತಿ ಜಾಗೃತಿಯನ್ನು ಮೂಡಿಸಿದ […]

News

ಮಂಗಳೂರು ಪ್ರೆಸ್ ಕ್ಲಬ್‌ನ ವರ್ಷದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಂಗಳೂರು ಪ್ರೆಸ್ ಕ್ಲಬ್‌ನಿಂದ ದಕ್ಷಿಣ ಕನ್ನಡ ಜಿಲ್ಲೆಯ ಸಾಧಕರಿಗೆ ನೀಡಲಾಗುವ ಮಂಗಳೂರು ಪ್ರೆಸ್ ಕ್ಲಬ್‌ನ 2024ನೇ ಸಾಲಿನ ವರ್ಷದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಕ್ಷೇತ್ರದಲ್ಲಿ ಅನುಪಮ ಸಾಧನೆಗೈದ ದಕ್ಷಿಣ ಕನ್ನಡ ಜಿಲ್ಲೆಯ ಸಾಧಕರನ್ನು ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿಗೆ ಶಿಫಾರಸು ಮಾಡಬಹುದಾಗಿದೆ. ಈ ವರೆಗೂ ಪ್ರಶಸ್ತಿ ಪಡೆಯದ ಎಲೆಮರೆಯ ಕಾಯಿಯಂತಿರುವ ಹಿರಿಯ ಸಾಧಕರಿಗೆ ಆದ್ಯತೆ ನೀಡಲಾಗುವುದು.   ಶಿಫಾರಸಿನಲ್ಲಿ ಸಾಧಕರ ಹೆಸರು, ಫೋಟೋ, ವಿಳಾಸ, ವೃತ್ತಿ, ವಯಸ್ಸು, ದೂರವಾಣಿ ಸಂಖ್ಯೆ ಮಾಹಿತಿಗಳಿರಬೇಕು. ಶಿಫಾರಸು ಪತ್ರದೊಂದಿಗೆ ಸಾಧಕರ […]

News

ಮಿನಿ ಒಲಂಪಿಕ್ಸ್ ನಲ್ಲಿ ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಯ ಅನನ್ಯಗೆ ಕಂಚಿನ ಪದಕ

ಬಂಟ್ವಾಳ: ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕದ ಮೂರನೇ ಮಿನಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಜೂಡೋ ಮಾರ್ಷಲ್ ಆರ್ಟ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಯ 6ನೇ ತರಗತಿ ವಿದ್ಯಾರ್ಥಿನಿ ಅನನ್ಯ ಆರ್. ಕಂಚಿನ ಪದಕದೊಂದಿಗೆ ತೃತೀಯ ಸ್ಥಾನವನ್ನು ಗೆದ್ದುಕೊಂಡಿದ್ದಾರೆ. ಪೊಳಲಿಯ ಸರ್ವಮಂಗಳ ಸಭಾಂಗಣದಲ್ಲಿ ಜೂಡೋ ಮಾರ್ಷಲ್ ಆರ್ಟ್ ತರಬೇತುದಾರ ರಾಜೇಶ್ ಬ್ರಹ್ಮರಕೂಟ್ಲು ಅವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ. ವಿದ್ಯಾವಿಲಾಸ ಶಾಲೆಯಾಡಳಿತ ಮಂಡಳಿಯ ಸುಬ್ರಾಯ ಕಾರಂತ್ ಸಹಕರಿಸಿದ್ದಾರೆ.

News

ಶ್ರೀ ಕ್ಷೇತ್ರ ಧರ್ಮ ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುಂಜಾಲಕಟ್ಟೆ ವಲಯದ ಉಳಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮ ಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ವಲಯದ ಉಳಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ನವಂಬರ್ 18ರಂದು ಸೋಮವಾರ ಬಂಟ್ವಾಳ ತಾಲೂಕಿನ ಉಳಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಜರಗಿತು. ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಉಳಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಚೆನ್ನಪ್ಪ ಸಾಲ್ಯಾನ್ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಅನೇಕ ಸೌಲಭ್ಯ ದೊರೆಯುತ್ತಿತ್ತು, ಅದರಲ್ಲೂ ಮಹಿಳೆಯರಿಗೆ ಧೈರ್ಯ ತುಂಬುವ ಕಾರ್ಯ ಜ್ಞಾನವಿಕಾಸ ಕೇಂದ್ರದ ಮೂಲಕ  ನಡೆಯುತ್ತಿದೆ ಎಂದರು. […]

News

ಮಂಗಳೂರಿನ ಸೈಂಟ್ ಆಗ್ನೆಸ್ ಸಿಬಿಎಸ್ಇ ಶಾಲೆಯಲ್ಲಿ ‘ಆಗ್ನೇವಾ 2K24’

ಮಂಗಳೂರು : ಸೈಂಟ್ ಆಗ್ನೆಸ್ ಸಿಬಿಎಸ್ಇ ಶಾಲೆಯ 60ನೇ ವರ್ಷದ ವಜ್ರ ಮಹೋತ್ಸವದ ಅಂಗವಾಗಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದಲ್ಲಿ ‘ಆಗ್ನೇವಾ 2k24’ ಪ್ರಕೃತಿ ವಿಷಯಾಧರಿತ ಚರ್ಚೆ, ಮುಖ ಚಿತ್ರಕಲೆ, ವೈವಿಧ್ಯಮಯ ಕಾರ್ಯಕ್ರಮ ಸ್ಪರ್ಧೆಗಳಂತಹ ಅಂತರ್ ಶಾಲಾ ಸ್ಪರ್ಧೆಗಳನ್ನು ಬೆಂದೂರಿನ ಸೈಂಟ್ ಸೆಬಾಸ್ಟಿಯನ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕರ್ನಾಟಕ ಪ್ರಾಂತೀಯ ಸಹಾಯಕ ಪ್ರೊವಿನ್ಶಿಯಲ್ ಸುಪೀರಿಯರ್ ಆಗಿರುವ ವಂದನೀಯ ಭಗಿನಿ ರೋಸ್ ಆಗ್ನೆಸ್ ಇವರು ಅಧ್ಯಕ್ಷರಾಗಿ ಹಾಗೂ ಬೆಂದೂರಿನ ಸೈಂಟ್ ಸೆಬಾಸ್ಟಿಯನ್ ಚರ್ಚ್ ಪ್ರಧಾನ ಧರ್ಮಗುರು ವಂದನೀಯ […]

News

ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಶ್ರಮದಾನ ಹಾಗೂ ಮಾಸಿಕ ಸಭೆ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗದ  ಸದಸ್ಯರು ಬಂಟ್ವಾಳ ತಾಲೂಕಿನ ವಗ್ಗದ ದೊಂಪದ ಪಲಿಕೆಯಿಂದ ಕಾಡಬೆಟ್ಟು ಅಂತರಂಗಡಿ ತನಕ ಸುಮಾರು ಒಂದುವರೆ ಕಿಲೋಮೀಟರ್ ರಸ್ತೆ ಬದಿ ಬೆಲೆದ ಬಲ್ಲೆ, ಹುಲ್ಲು, ಗಿಡ ಗಂಟೆಗಳನ್ನು  ಕಡಿದು  ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಮಾಡಿದರು. ಈ ಶ್ರಮದಾನ ಕಾರ್ಯಕ್ರಮಕ್ಕೆ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ., ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಸದಸ್ಯ ಪ್ರಮೋದ್ ಕುಮಾರ್ ರೈ […]

News

ಹಾಸ್ಯಗಾರ ದಿವಂಗತ ಬಂಟ್ವಾಳ ಜಯರಾಮ ಆಚಾರ್ಯರಿಗೆ ಶ್ರದ್ಧಾಂಜಲಿ  ಅರ್ಪಣೆ

ಹಾಸ್ಯಗಾರ ಬಂಟ್ವಾಳ ಜಯರಾಮ ಆಚಾರ್ಯರು ತೆಂಕುತಿಟ್ಟಿನ ಹಾಸ್ಯಗಾರರಲ್ಲಿ ಅನನ್ಯ ಸ್ಥಾನವನ್ನು ಪಡೆದ ಕಲಾವಿದರಾಗಿದ್ದು ಯಕ್ಷಗಾನದಲ್ಲಿ ಹಾಸ್ಯ ಪಾತ್ರಗಳನ್ನು ಮಾದರಿಯಾಗಿ ರೂಪಿಸಿದವರು. ಈ ಪರಂಪರೆಯನ್ನು ಮುಂದುವರಿಸುವ ಹಾಸ್ಯ ಕಲಾವಿದರು ಯಕ್ಷ ರಂಗದಲ್ಲಿ ಮೂಡಿ ಬರಬೇಕಾಗಿದೆಯೆಂದು ಬಂಟ್ವಾಳ ಜಯರಾಮ ಆಚಾರ್ಯರ ಮೂರು ದಶಕಗಳ ಒಡನಾಡಿ ಕಲಾವಿದ ಪಾತಾಳ ಅಂಬಾಪ್ರಸಾದ್ ತಿಳಿಸಿದರು. ಕೊಂಬೋಟು ಕುಟುಂಬಸ್ಥರ ತಡವಾಡುಮನೆ ಉಬರಡ್ಕ ಸುಳ್ಯ ಇಲ್ಲಿ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ಜರಗಿದ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಮಹಾಭಾರತ ಸರಣಿಯ ತಾಳಮದ್ದಳೆ ಕಾರ್ಯಕ್ರಮದಲ್ಲಿ […]

News

ಸಿಡಿಲು ಬಡಿದು ಬಾಲಕ ಮೃತ್ಯು

ಬಂಟ್ವಾಳ : ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಕೆದಿಲ ಗ್ರಾಮದ ಮುರಿಯಾಜೆ ಎಂಬಲ್ಲಿ ನವಂಬರ್ 18ರಂದು ಭಾನುವಾರ ಸಂಜೆ ನಡೆದಿದಿರುವ ಬಗ್ಗೆ ವರದಿಯಾಗಿದೆ. ಮೃತನನ್ನು ಸ್ಥಳೀಯ ನಿವಾಸಿ ಚಂದ್ರಹಾಸ ಎಂಬವರ ಪುತ್ರ 14 ವರ್ಷ ಪ್ರಾಯದ ಸುಭೋದ್ ಸಿ. ಎಂದು ಗುರುತಿಸಲಾಗಿದೆ. ಬಾಲಕ ಕಲ್ಲಡ್ಕ ಶ್ರೀರಾಮ ಪೌಡಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ವಿಟ್ಲ ಕಂದಾಯ ನಿರೀಕ್ಷಕ ಪ್ರಶಾಂತ್ ಶೆಟ್ಟಿ, ಕೆದಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ […]

News

ಸೂರಿಕುಮೇರುವಿನಲ್ಲಿರುವ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ಭಾತೃತ್ವದ ಭಾನುವಾರ ವಿಜೃಂಭಣೆಯಿಂದ ಆಚರಣೆ

ಮನುಷ್ಯನ ಜೀವನವೆಂಬುದು ಮೇಣದ ಬತ್ತಿಯಂತೆ ಇರಬೇಕು – ಫಾದರ್ ಅರುಣ್ ವಿಲ್ಸನ್ ಲೋಬೊ ಬಂಟ್ವಾಳ :   ಸೂರಿಕುಮೇರುವಿನಲ್ಲಿರುವ ಸೈಂಟ್ ಜೋಸೆಫ್ ಚರ್ಚ್ ನಲ್ಲಿ  ನವಂಬರ್ 17ರಂದು ಭಾತೃತ್ವದ ಭಾನುವಾರವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಂಗಳೂರು ಪದುವಾ ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಫಾದರ್ ಅರುಣ್ ವಿಲ್ಸನ್ ಲೋಬೊರವರು ದಿವ್ಯ ಬಲಿಪೂಜೆಯ ನೇತೃತ್ವವನ್ನು ವಹಿಸಿದ್ದರು. ಈ ಸಂದರ್ಭ ಆಶೀರ್ವಚನ ನೀಡಿದ ಅವರು, ಮನುಷ್ಯನ ಜೀವನವೆಂಬುದು ಮೇಣದ ಬತ್ತಿಯಂತೆ ಇರಬೇಕು. ಮೇಣದ ಬತ್ತಿ ಹೇಗೆ ತಾನು ಉರಿದು ಪರರಿಗೆ ಬೆಳಕು ನೀಡುತ್ತದೆಯೋ, ಅಂತೆಯೇ […]

News

ಭಾಷೆಗಳ ನಡುವೆ ಜಗಳ ಹುಟ್ಟಿಸುವುದು ಕೆಟ್ಟ ರಾಜಕಾರಣ – ಡಾ. ಪುರುಷೋತ್ತಮ ಬಿಳಿಮಲೆ

ಜನ ಎಚ್ಚೆತ್ತುಕೊಳ್ಳದೆ ಹೋದಲ್ಲಿ ದಕ್ಷಿಣ ಭಾರತದ ಭಾಷೆಗಳೆಲ್ಲವೂ ನಶಿಸಲಿವೆ ಬಹುಭಾಷಿಕ ಹಾಗೂ ಬಹು ಸಂಸ್ಕೃತಿಗಳ ಸಮುದಾಯದವರಾದ ದಕ್ಷಿಣ ಭಾರತೀಯರು ಪರಸ್ಪರ ಕಚ್ಚಾಡುವುದನ್ನು ಮುಂದುವರೆಸಿದಲ್ಲಿ ದೇಶ ಶೀಘ್ರವಾಗಿ ಹಿಂದಿಮಯವಾಗುವುದರಲ್ಲಿ ಯಾವ ಅನುಮಾನವೂ ಇಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದರು. ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಕೇರಳ ಮತ್ತು ಗೋವಾ ರಾಜ್ಯದ 149 ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಭಿನ್ನ ಭಾಷಿಕರ ನಡುವೆ ವೈಮನಸ್ಯವನ್ನು ಮೂಡಿಸುವ ಕೆಲಸವನ್ನು ತಮ್ಮ […]

You cannot copy content of this page