November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೆಪ್ಟೆಂಬರ್ 8ರ ಮೊಂತಿ ಫೆಸ್ಟ್‌ಗೆ ಕರಾವಳಿ-ಮಲೆನಾಡಿನ ನಾಲ್ಕು ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲು ಕ್ರಿಶ್ಚಿಯನ್ಸ್ ಯೂನಿಯನ್ ಪುತ್ತೂರು ಆಗ್ರಹ

MLC ಐವನ್ ಡಿಸೋಜ ಅವರಿಗೆ ವಿಧಾನ ಪರಿಷತ್ ಮುಖ್ಯ ಸಚೇತಕ ಹುದ್ದೆ ನೀಡುವಂತೆಯೂ ಮೌರಿಸ್ ಮಸ್ಕರೇನ್ಹಸ್ ಒತ್ತಾಯ ಪುತ್ತೂರು: ಕರಾವಳಿ ಹಾಗೂ ಮಲೆನಾಡು ಭಾಗದ ಕ್ರೈಸ್ತ ಸಮುದಾಯದ ಪ್ರಮುಖ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಕೌಟುಂಬಿಕ ಹಬ್ಬವಾದ ಮೊಂತಿ ಫೆಸ್ಟ್ (ಮಾತೆ ಮರಿಯಮ್ಮನವರ ಜನ್ಮದಿನೋತ್ಸವ) ಪ್ರಯುಕ್ತ ಸೆಪ್ಟೆಂಬರ್ 8ರಂದು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸುವಂತೆ ಕ್ರಿಶ್ಚಿಯನ್ಸ್ ಯೂನಿಯನ್ ಪುತ್ತೂರು (ರಿ.) ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಈ ಕುರಿತು ಯೂನಿಯನ್ ವತಿಯಿಂದ […]

News

ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ಚೇತನ್ ಆರ್. IPS

ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾಗಿ (DIGP) ಹಿರಿಯ IPS ಅಧಿಕಾರಿ ಚೇತನ್ ಆರ್. ಅವರು ಆಗಸ್ಟ್ 31ರಂದು ಸೋಮವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಬೆಳಗಿನ ಜಾವ ನಿಯಮಾನುಸಾರ ಕಾರ್ಯಭಾರ ವಹಿಸಿಕೊಂಡ ಅವರು, ವಲಯದ ವ್ಯಾಪ್ತಿಗೆ ಒಳಪಡುವ ಜಿಲ್ಲೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸುವುದು ಹಾಗೂ ಸಾರ್ವಜನಿಕ ಸ್ನೇಹಿ ಪೊಲೀಸ್ ವ್ಯವಸ್ಥೆಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ. ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯೆಂದು ಹೆಸರುವಾಸಿಯಾಗಿರುವ ಚೇತನ್ ಆರ್. ಅವರ ಆಗಮನದಿಂದ ಪಶ್ಚಿಮ ವಲಯದ ಪೊಲೀಸ್ ಇಲಾಖೆಯಲ್ಲಿ ಹೊಸ […]

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ ಸಂಘಟನೆಯ ಪ್ರಾರಂಭೋತ್ಸವ ಹಾಗೂ ಪುತ್ತೂರು ವಿಭಾಗದ ನೌಕರರ ಕೂಟದ ಅಧ್ಯಕ್ಷ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಪದೋನ್ನತಿಯ ನಿಮಿತ್ತ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವು ಸೆಪ್ಟೆಂಬರ್ 02ರಂದು ಬುಧವಾರ ಬೆಳಿಗ್ಗೆ 10:30ಕ್ಕೆ ಪುತ್ತೂರಿನ ಮೈನ್ ರೋಡ್‌ನಲ್ಲಿರುವ ಲಕ್ಷ್ಮೀ ಹೋಟೆಲ್ ನಲ್ಲಿ ಜರುಗಲಿದೆ. ಮುಖ್ಯ ಉಪಸ್ಥಿತಿ ಹಾಗೂ ಪದಾಧಿಕಾರಿಗಳು: […]

News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು ಅಖಿಲ ಭಾರತ ಕ್ರೈಸ್ತ ಮಹಾಸಭಾ (ನೋಂದಾಯಿತ) ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಕಾರ್ಮಿನ್ ಲೂಯಿಸ್ ನೇತೃತ್ವದಲ್ಲಿ ಬೈಂದೂರು ತಾಲೂಕಿನ ಕ್ರೈಸ್ತ ಸಮುದಾಯದ ಸದಸ್ಯರು ಮನವಿ ಸಲ್ಲಿಸಿದರು. ಆಗಸ್ಟ್ 29ರಂದು ಶನಿವಾರ ಬೈಂದೂರು ತಾಲೂಕು ತಹಶೀಲ್ದಾರ್ ಅವರ ಅನುಪಸ್ಥಿತಿಯಲ್ಲಿ ಉಪತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ ನಿಯೋಗ, ಬಳಿಕ ಬೈಂದೂರು […]

News

ಪುತ್ತೂರು ಚಲೋಗೆ ಪೊಲೀಸ್ ಸರ್ಪಗಾವಲು – ಹಿರಿಯ ಅಧಿಕಾರಿಗಳು ಸೇರಿ ಭಾರೀ ಬಂದೋಬಸ್ತ್

ನಗರದಲ್ಲಿ ಇಂದು ಪೊಲೀಸ್ ಪಥಸಂಚಲನ ಪುತ್ತೂರು: ಆಗಸ್ಟ್ 31ರಂದು ಸೋಮವಾರ ನಡೆಯಲಿರುವ ಪುತ್ತೂರು ಚಲೋ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿಯನ್ನು ಪೊಲೀಸ್ ಇಲಾಖೆಯಿಂದ ನೀಡಲಾಗಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಆಗಸ್ಟ್ 30ರಂದು ಭಾನುವಾರ ಪೊಲೀಸ್ ಪಥಸಂಚಲನ ನಡೆಸಲಾಗಿದೆ. ಕಾರ್ಯಕ್ರಮಕ್ಕೆ ವ್ಯಾಪಕ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಗಳನ್ನು ಭದ್ರತಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ವ್ಯಾಪಕ ಪೊಲೀಸ್ […]

News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು ಬಲಪಡಿಸಿ ಉತ್ತಮ ಆರೋಗ್ಯವನ್ನು ಹೊಂದಲು ಸಾಧ್ಯ ಎಂದು ಕೇಂದ್ರ ಸರ್ಕಾರದ ಭಾರತೀಯ ಔಷಧ ಪದ್ಧತಿಯ ರಾಷ್ಟ್ರೀಯ ಪರಿಷತ್ ಅಧ್ಯಕ್ಷೆ ವೈದ್ಯ ಮನೀಷಾ ಕೋಟೆಕಾರ್ ಅವರು ಹೇಳಿದರು. ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಆಪ್ತಾಸ್ ಆಯುರ್ವೇದ ಟ್ರಸ್ಟ್‌ನ ದಶಮಾನೋತ್ಸವದ ಅಂಗವಾಗಿ ಇಂದ್ರಿಯ ಆರೋಗ್ಯದ ಕುರಿತು ಆಯೋಜಿಸಲಾದ ಅಂತಾರಾಷ್ಟ್ರೀಯ ಸಮಾವೇಶ ‘ಪುನರ್ವಸು’ವನ್ನು ಆಗಸ್ಟ್ […]

News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅವರು ತಿಳಿಸಿದ್ದಾರೆ. ಒಟ್ಟು 430 ಪವರ್‌ಮ್ಯಾನ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಈಗಾಗಲೇ ನಿನ್ನೆ ಹಾಗೂ ಇಂದು ಸೇರಿ 395 ಮಂದಿಗೆ ನೇಮಕಾತಿ ಆದೇಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರಸ್ತುತ ಸುಮಾರು 28.10 ಲಕ್ಷ ವಿದ್ಯುತ್ ಸಂಪರ್ಕಗಳಿದ್ದು, ಮನೆಗಳು, ವಾಣಿಜ್ಯ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ […]

News

ಓಣಂ ಸಂಭ್ರಮದ ನಡುವೆ ದುರಂತ – ತೆರೆದ ಬಾವಿಗೆ ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು

ಓಣಂ ಆಚರಣೆಯ ಸಂಭ್ರಮದ ನಡುವೆ ಸಂಭವಿಸಿದ ದಾರುಣ ಘಟನೆಯೊಂದರಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ತೆರೆದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಕನ್ಹಂಗಾಡ್ ಸಮೀಪದ ಚೀಮೇನಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಚೀಮೇನಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಕ್ಕಾಡ್ ಅನಾಕಡಿ ನಿವಾಸಿ ಧನೇಶ್ ಅವರ ಪುತ್ರ 15 ವರ್ಷ ಪ್ರಾಯದ ಸನೂಪ್ ಎಂದು ಗುರುತಿಸಲಾಗಿದೆ. ಸನೂಪ್ ತಿಮಿರಿ ಕುಟ್ಟಮ್ಮತ್ತು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಎಂದು ತಿಳಿದುಬಂದಿದೆ. ಗುರುವಾರ ರಾತ್ರಿ ನಡೆದ ಓಣಂ ಆಚರಣೆ ಕಾರ್ಯಕ್ರಮದಲ್ಲಿ […]

News

National Library Day Celebrated at Father Muller Charitable Institutions Mangaluru

The National Library Day was celebrated at Father Muller Charitable Institutions Central Library on 29th August 2026 at 3.00p.m. in the Decennial Memorial Hall of Father Muller Knowledge Centre. The occasion was to commemorate the 134th Birth anniversary of Padmashri Late Dr S.R. Ranganathan who is considered as Father of Library Science in India. On […]

News

ನೇಪಾಳದ ದುಃಖದಲ್ಲಿ ಮಂಗಳೂರು ಧರ್ಮಕ್ಷೇತ್ರವೂ ಭಾಗಿ – ವಿಶೇಷ ಪ್ರಾರ್ಥನೆಗೆ ಬಿಷಪ್ ಸಲ್ಡಾನ್ಹಾ ಕರೆ

ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ಫಾದರ್ ರೂಪೇಶ್ ಮಾಡ್ತಾ ಹಾಗೂ ರೋಯ್ ಕ್ಯಾಸ್ತೆಲಿನೊ ಜಂಟಿ ಪತ್ರಿಕಾ ಪ್ರಕಟನೆ ಮಂಗಳೂರು: ನೇಪಾಳದ ವಿವಿಧ ಭಾಗಗಳಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದ ಅಪಾರ ಜೀವಹಾನಿ, ಆಸ್ತಿಪಾಸ್ತಿ ನಾಶ ಮತ್ತು ಮಾನವೀಯ ಸಂಕಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ಧರ್ಮಕ್ಷೇತ್ರವು ತೀವ್ರ ದುಃಖ ಹಾಗೂ ಆಳವಾದ ಸಹಾನುಭೂತಿ ವ್ಯಕ್ತಪಡಿಸಿದೆ. ದುರಂತದಿಂದ ಸಂಕಷ್ಟಕ್ಕೊಳಗಾದ ಪ್ರತಿಯೊಬ್ಬರ ನೋವಿನಲ್ಲಿ ಮಂಗಳೂರು ಧರ್ಮಕ್ಷೇತ್ರವು ಭಾಗಿಯಾಗಿ ನಿಲ್ಲಲಿದೆ ಎಂದು ತಿಳಿಸಿದೆ. ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಅತೀ ವಂದನೀಯ […]

You cannot copy content of this page