ಡೋನ್ ಬೊಸ್ಕೊ ಸಭಾಂಗಣದ ದೀರ್ಘಕಾಲದ ವ್ಯವಸ್ಥಾಪಕ ಬೊನಿಫಾಸ್ ಪಿಂಟೊ ನಿಧನ
ಖ್ಯಾತ ಸಾಂಸ್ಕೃತಿಕ ಸಂಘಟಕ ಮತ್ತು ಕೊಂಕಣಿ ನಾಟಕ ಸಭಾ ಸಂಸ್ಥೆ ಹಾಗೂ ಮಂಗಳೂರಿನ ಹೆಸರಾಂತ ಡೋನ್ ಬೊಸ್ಕೊ ಸಭಾಂಗಣದ ದೀರ್ಘಕಾಲದ ವ್ಯವಸ್ಥಾಪಕ 62 ವರ್ಷ ಪ್ರಾಯದ ಬೊನಿಫಾಸ್ ಪಿಂಟೊ ಅವರು ಅಲ್ಪಾವಧಿಯ ಆರೋಗ್ಯ ಸಮಸ್ಯೆಯಿಂದ ಇಂದು ನವಂಬರ್ 10ರಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಬೊನಿಫಾಸ್ ಪಿಂಟೊ ಇವರು ತಮ್ಮ ವೃತ್ತಿ ಜೀವನದ ಅವಧಿಯಲ್ಲಿ 28 ವರ್ಷಗಳ ಕಾಲ ಕೆಎನ್‌ಎಸ್‌ಗೆ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಇವರು ತಮ್ಮ ಸಂಘಟನಾ ಚಾತುರ್ಯತೆ, ಸಮಯಪ್ರಜ್ಞೆ ಮತ್ತು ಸರಳ ಸ್ವಭಾವದಿಂದಾಗಿ ಜನರ ಮನ್ನಣೆಗಳಿಸಿದ್ದರು. ಸ್ಪರ್ಧೆಗಳ […]













