November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ. ಆಗಸ್ಟ್ 27ರಂದು ಗುರುವಾರ ನಡೆದ ಈ ದುರ್ಘಟನೆಯಲ್ಲಿ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಹಾಗೂ ವಿಮಾನ ತರಬೇತುದಾರ ಸಾಚಿನ್ ಭಾಟಿಯಾ ಮೃತಪಟ್ಟಿದ್ದಾರೆ. ಅಭಿಷೇಕ್ ಪೂಜಾರಿ ಅವರು ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆ ಮೂಲದವರು. ಕಳೆದ ಸುಮಾರು ಎರಡೂವರೆ ವರ್ಷಗಳಿಂದ ಉತ್ತರ ಪ್ರದೇಶದ […]

News

“ಕರಾವಳಿಗೆ ಹೈಕೋರ್ಟ್ ಸಂಚಾರಿ ಪೀಠ – ಸಮಿತಿ ರಚನೆಗೆ ಸಿಜೆ ಭರವಸೆ”

ಬೆಂಗಳೂರು: ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ವಿಭು ಬಕ್ರು ಅವರು ಭರವಸೆ ನೀಡಿದ್ದಾರೆ ಎಂದು ಹೈಕೋರ್ಟ್ ಕರಾವಳಿ ಸಂಚಾರಿ ಪೀಠ ಸ್ಥಾಪನೆ ಹೋರಾಟ ಸಮಿತಿಯ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ತಿಳಿಸಿದ್ದಾರೆ. ಕರಾವಳಿ ಭಾಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಕರ್ನಾಟಕ ಸರ್ಕಾರ ಈಗಾಗಲೇ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅಗತ್ಯವಿರುವ ಮೂಲಸೌಕರ್ಯಗಳನ್ನು ಒದಗಿಸಲು ಸಿದ್ಧವಿದೆ. […]

News

CODP ಮಂಗಳೂರು ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ಇವರ ಸಹಯೋಗದಲ್ಲಿ ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕತ್ವಕ್ಕೆ ತರಬೇತಿ

ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ನಾಯಕತ್ವವನ್ನು ಬಲಪಡಿಸುವ ಉದ್ದೇಶದಿಂದ ಸಿಓಡಿಪಿ ಮಂಗಳೂರು ಹಾಗೂ ಕ್ರಾಸ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದಲ್ಲಿ ಮಹಿಳಾ ಸಬಲೀಕರಣ ಯೋಜನೆಯಡಿ “ಸ್ಥಳೀಯ ಆಡಳಿತದಲ್ಲಿ ನಾಯಕತ್ವ” ವಿಷಯದ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವು ಆಗಸ್ಟ್ 25ರಂದು ಮಂಗಳವಾರ ಮಂಗಳೂರಿನ ಸಿಓಡಿಪಿ ಮದರ್ ತೆರೇಸಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ತರಬೇತುದಾರ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ದುರ್ಗದಾಸ್ ಶೆಟ್ಟಿ ಭಾಗವಹಿಸಿ, ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ಪಾತ್ರ, ಪರಿಣಾಮಕಾರಿ ನಾಯಕತ್ವ ಕೌಶಲ್ಯಗಳು ಹಾಗೂ ಪಂಚಾಯತ್ ರಾಜ್ ವ್ಯವಸ್ಥೆಯ ಕುರಿತು […]

News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ ಅಗತ್ಯ ವಸ್ತುಗಳ ವಿತರಣಾ ಕಾರ್ಯಕ್ರಮವು ದೆ ಮರ್ಸಿದೆ ಅನಾಥಾಶ್ರಮ ಪಾಣೀರ್, ದೇರಳಕಟ್ಟೆಯಲ್ಲಿ ನಡೆಯಿತು. ಮಂಗಳೂರು ದಕ್ಷಿಣ ಕ್ಷೇತ್ರದ ಮಾಜಿ ಶಾಸಕ ಜೆ.ಆರ್. ಲೋಬೊ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸೈಂಟ್ ಮಿಲಾಗ್ರಿಸ್ ಸಂಸ್ಥೆಯ ಮುಖ್ಯಸ್ಥರಾದ ಜೋರ್ಜ್ ಫೆರ್ನಾಂಡಿಸ್ ಅವರ ನೇತೃತ್ವದಲ್ಲಿ ವಿವಿಧ ಆಶ್ರಮಗಳಿಗೆ ಅಗತ್ಯ […]

News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ ಚರ್ಚುಗಳು ಮತ್ತು ಸಮುದಾಯಗಳು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಒಳಗೊಂಡ ಮನವಿಪತ್ರವನ್ನು ಸಲ್ಲಿಸಿತು.ಸಭೆಯಲ್ಲಿ ಕರ್ನಾಟಕದಲ್ಲಿ 48 ಲಕ್ಷಕ್ಕೂ ಅಧಿಕ ಕ್ರೈಸ್ತರು ವಾಸಿಸುತ್ತಿದ್ದು, ಅಲ್ಪಸಂಖ್ಯಾತರ ಅಭಿವೃದ್ಧಿ ಮಂಡಳಿಗಳು ಸೇರಿದಂತೆ ವಿವಿಧ ಸಂಬಂಧಿತ ಸರ್ಕಾರಿ ಸಂಸ್ಥೆಗಳಲ್ಲಿ ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ ಸಮುದಾಯಗಳಿಗೆ ಸಮರ್ಪಕ ಮತ್ತು ನ್ಯಾಯಸಮ್ಮತ ಪ್ರಾತಿನಿಧ್ಯ ಕಲ್ಪಿಸಬೇಕೆಂದು […]

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಕಂಬಳಪದವು ನಿವಾಸಿ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾ ಶಿಕ್ಷೆಗೊಳಗಾದ ಆರೋಪಿ. 2019ರ ಅಕ್ಟೋಬರ್ 8ರಂದು ಮಧ್ಯಾಹ್ನ ಸುಮಾರು 12 ಗಂಟೆಗೆ ತನ್ನ ಮನೆಯಲ್ಲಿ ಮೊಬೈಲ್ ನೀಡುವಂತೆ ತಂಗಿ ಫಿಯೋನಾ ಸ್ವೀಡಲ್ ಕುಟಿನ್ಹಾ ಅವರನ್ನು ಆರೋಪಿ ಕೇಳಿದ್ದ ಎನ್ನಲಾಗಿದೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತುಕತೆ ನಡೆದ ಸಂದರ್ಭದಲ್ಲಿ ಕೋಪಗೊಂಡ ಆರೋಪಿ […]

News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ ಕಾರ್ಯದರ್ಶಿ ಎ. ವೀರು ಶೆಟ್ಟಿ ಮಾತನಾಡಿ, ತಾಲೂಕು ಹಾಗೂ ವಲಯ ಭಜನಾ ಪರಿಷತ್‌ಗಳ ಮೂಲಕ ಮಕ್ಕಳ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ, ಕಾನೂನು ಮಾಹಿತಿ ಹಾಗೂ ಆರೋಗ್ಯ ಶಿಬಿರ, ಭಜನೋತ್ಸವ, ಮನೆ-ಮನೆ ಭಜನೆ, ಸತ್ಸಂಗ, ಶ್ರಮದಾನ, ಸ್ವಚ್ಛತಾ ಕಾರ್ಯಕ್ರಮ, ರಾಷ್ಟ್ರೀಯ ದಿನಾಚರಣೆ ಹಾಗೂ ವಿವಿಧ ಹಬ್ಬ-ಹರಿದಿನಗಳ ಆಚರಣೆ ಸೇರಿದಂತೆ ಹಲವು […]

News

ಮಡಂತ್ಯಾರಿನ ಶಾನ್ವಿ ಮತ್ತು ಶ್ರೇಯಸ್‌ ಅವರಿಗೆ ‘ರಾಷ್ಟ್ರೀಯ ಪ್ರತಿಭಾ ರತ್ನ’ ಗೌರವ

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್‌ (ರಿ.), ಕರ್ನಾಟಕ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಸ್ವಾತಂತ್ರ್ಯೋತ್ಸವ–2026’ ಕಾರ್ಯಕ್ರಮದಲ್ಲಿ ಮಡಂತ್ಯಾರಿನ ಪ್ರತಿಭೆಗಳಾದ ಶಾನ್ವಿ ಪೂಜಾರಿ ಹಾಗೂ ಶ್ರೇಯಸ್ ಪೂಜಾರಿ ಅವರಿಗೆ ‘ರಾಷ್ಟ್ರೀಯ ಪ್ರತಿಭಾ ರತ್ನ’ ಪುರಸ್ಕಾರ ನೀಡಿ ಗೌರವಿಸಲಾಯಿತು. ಆಗಸ್ಟ್ 23ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕ ಮಹಾದೇವಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಪ್ರತಿಭೆಗಳನ್ನು ಗುರುತಿಸಿ ಸನ್ಮಾನಿಸಲಾಯಿತು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆಯಾಗಿದ್ದು, ಭರತನಾಟ್ಯ ಹಾಗೂ ಯಕ್ಷಗಾನ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ […]

News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ ವೈಸಿಎಸ್ ಮಡಂತ್ಯಾರು ಘಟಕಗಳ ಆಶ್ರಯದಲ್ಲಿ, ಮಾಂಡ್ ಸೊಭಾಣ್, ಮಂಗಳೂರು ಇವರ ಸಹಯೋಗದೊಂದಿಗೆ ಕೊಂಕಣಿ ಮಾನ್ಯತಾ ದಿವಸ್‌ ಅನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಗುಮಟ್ ತರಬೇತಿ ಆಯೋಜಿಸಲಾಗಿದ್ದು, ಡೆಲ್ಟನ್ ಹಾಗೂ ಕುಮಾರಿ ನಿಕೋಲ್ ಅವರು ಮಾಂಡ್ ಸೊಭಾಣ್ ತಂಡದೊಂದಿಗೆ ತರಬೇತಿ ನೀಡಿದರು. ಸುಮಾರು 40 ಮಂದಿ ತರಬೇತಿಯಲ್ಲಿ ಪಾಲ್ಗೊಂಡು […]

News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಚಲಿಸುತ್ತಿದ್ದ ವಾಹನಗಳ ವಿರುದ್ಧ ಇಂದು ಆಗಸ್ಟ್ 25ರಂದು ಮಂಗಳವಾರ ಪುತ್ತೂರು ಸಂಚಾರ ಠಾಣಾ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದು, ದಂಡ ವಿಧಿಸಿದ್ದಾರೆ. ಸಾರ್ವಜನಿಕರು ಯಾವುದೇ ಹಬ್ಬ-ಹರಿದಿನಗಳು, ಉತ್ಸವಗಳು, ರ‍್ಯಾಲಿ ಅಥವಾ ಖಾಸಗಿ ಕಾರ್ಯಕ್ರಮಗಳ ನೆಪದಲ್ಲಿ ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ವಾಹನ ಚಾಲನೆ ಮಾಡಿದರೆ ಸಹಿಸುವುದಿಲ್ಲ ಎಂದು ಪೊಲೀಸರು […]

You cannot copy content of this page