ಕಥೊಲಿಕ್ ಸಭಾ ಅಧ್ಯಕ್ಷರ ಮೇಲಿನ ಹಲ್ಲೆ ಪ್ರಕರಣ, ಬಾಕಿ ಉಳಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಮಹಿಳಾ ಆಯೋಗ ಒತ್ತಾಯ
ಮಂಗಳೂರು : ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಜೆರೊಮ್ ಡಿಸೋಜ ಪಾನೀರ್ ಇವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ವಾಮಂಜೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದು ಬಾಕಿ ಉಳಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಮಂಗಳೂರು ಧರ್ಮಕ್ಷೇತ್ರದ ಮಹಿಳಾ ಆಯೋಗದ ಕಾರ್ಯದರ್ಶಿ ಅನಿತಾ ಫ್ರಾಂಕ್ ನೇತೃತ್ವದಲ್ಲಿ ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಅವರನ್ನು ಗುರುವಾರ ಭೇಟಿಯಾಗಿ ಲಿಖಿತ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ. ಆಲ್ವಿನ್ ಡಿಸೋಜ ಅವರು ಅಕ್ಟೋಬರ್ 5ರಂದು ಪಾವೂರು ಉಳಿಯ ದ್ವೀಪ […]













