ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವೆಬ್‌ಸೈಟ್ ಅನಾವರಣ
“ಕಷ್ಟದಲ್ಲಿರುವವರಿಗೆ ನೆರವಾದ ತೃಪ್ತಿ ನನ್ನದು” – ಹರಿಕೃಷ್ಣ ಪುನರೂರು ಸಮಾಜದಲ್ಲಿ ಕಷ್ಟದಲ್ಲಿರುವವರಿಗೆ ತಮ್ಮಿಂದಾದ ನೆರವು ನೀಡಿದ ಸಂತೃಪ್ತಿ ಇದೆ. “ಕೊಟ್ಟದ್ದು ತನಗೆ, ಬಚ್ಚಿಟ್ಟದ್ದು ಪರರಿಗೆ” ಎಂಬ ಮಾತಿನಂತೆ ಬದುಕಿನಲ್ಲಿ ನಡೆದುಕೊಂಡು ಬಂದಿದ್ದೇನೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವಾಧ್ಯಕ್ಷ ಹರಿಕೃಷ್ಣ ಪುನರೂರು ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವೆಬ್‌ಸೈಟ್ dkwju.com ಅನಾವರಣಗೊಳಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಕನ್ನಡದ ಸೇವೆಯೊಂದಿಗೆ ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಸಿಕೊಂಡಿರುವುದಾಗಿ ತಿಳಿಸಿದ […]













