ಅಪಘಾತ ತಡೆಗೆ ತಕ್ಷಣ ಕ್ರಮ ಕೈಗೊಳ್ಳಿ; ಹೆದ್ದಾರಿಗಳಲ್ಲಿ ಸುರಕ್ಷತಾ ವ್ಯವಸ್ಥೆ ಬಲಪಡಿಸಿ – SP ಡಾ. ಅರುಣ್ ಕುಮಾರ್
ಮಂಗಳೂರು: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಪದೇಪದೇ ಸಂಭವಿಸುತ್ತಿರುವ ಅಪಘಾತಗಳಿಗೆ ಕಡಿವಾಣ ಹಾಕಲು ಅಗತ್ಯ ಸುರಕ್ಷತಾ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ನವಂಬರ್ 18ರಂದು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ಇಲಾಖೆ ರಸ್ತೆಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಅಪಘಾತಗಳು ಮತ್ತು ಜೀವಹಾನಿ ಸಂಭವಿಸುತ್ತಿರುವ […]













