November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಹನೂರು ಶೂಟೌಟ್ ಪ್ರಕರಣ – ಆರ್ಚ್‌ಬಿಷಪ್ ಪೀಟರ್ ಮಚಾದೊ ಬೆಂಬಲಕ್ಕೆ ನಿಂತ DAPC; ನ್ಯಾಯಾಂಗ ತನಿಖೆಗೆ ಆಗ್ರಹ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಗುಂಡಿನ ಚಕಮಕಿ ಮತ್ತು ಮೂವರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಮಹಾ ಧರ್ಮಕ್ಷೇತ್ರದ ಆರ್ಚ್‌ಬಿಷಪ್ ಪರಮ ಪೂಜ್ಯ ಅತೀ ವಂದನೀಯ ಡಾ. ಪೀಟರ್ ಮಚಾದೊ ಅವರ ಆಗ್ರಹಕ್ಕೆ ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಪ್ರಕರಣದ ಕುರಿತು ನ್ಯಾಯಸಮ್ಮತ, ನಿಷ್ಪಕ್ಷಪಾತ ಹಾಗೂ ಪಾರದರ್ಶಕ ನ್ಯಾಯಾಂಗ ತನಿಖೆ ನಡೆಸಬೇಕೆಂದು DAPC ಒಗ್ಗಟ್ಟಿನಿಂದ ಒತ್ತಾಯಿಸಿದೆ. ಘಟನೆಯ ಕುರಿತು ಪ್ರತಿಕ್ರಿಯಿಸಿದ DAPC ಯ ಆರ್ಚ್‌ಬಿಷಪ್ ರೆವರೆಂಡ್ […]

News

ಸ್ನೇಹ ಸದನದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ : ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ ಅಗತ್ಯ ವಸ್ತುಗಳ ವಿತರಣೆ

80 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಗಸ್ಟ್ 15ರಂದು ಕಾರವಾರದ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ ಉರ್ವಾ ಹಾಗೂ ವಾಲೆನ್ಸಿಯಾ ಶಾಖೆಗಳ ಜಂಟಿ ಆಶ್ರಯದಲ್ಲಿ ಗುರುಪುರ ಕೈಕಂಬದ ‘ಸ್ನೇಹ ಸದನ’ (ಎಚ್‌ಐವಿ ಪೀಡಿತ ವಿದ್ಯಾರ್ಥಿಗಳ ಆಶ್ರಮ)ದಲ್ಲಿ ಅಗತ್ಯ ವಸ್ತುಗಳ ವಿತರಣಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸ್ನೇಹ ಸದನ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾದರ್ ಸುನಿಲ್ ಜೋಸೆಫ್ ಅವರು, “ಸೈಂಟ್ ಮಿಲಾಗ್ರಿಸ್ ಸಂಸ್ಥೆಯು ಹಣಕಾಸು ವ್ಯವಹಾರಗಳ ಜೊತೆಗೆ ಹಲವಾರು ಸಮಾಜಮುಖಿ ಹಾಗೂ ಮಾನವೀಯ ಕಾರ್ಯಕ್ರಮಗಳಲ್ಲಿ […]

News

ಸೆಪ್ಟೆಂಬರ್  8ಕ್ಕೆ ದಕ್ಷಿಣ ಕನ್ನಡ–ಉಡುಪಿ ಜಿಲ್ಲೆಗಳಲ್ಲಿ ರಜೆ ಘೋಷಿಸಲು ಮನವಿ

ಸಚಿವ ಯು.ಟಿ. ಖಾದರ್‌ ಅವರಿಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಹಾಗೂ ಆಲ್ವಿನ್ ಡಿಸೋಜ ಪಾನೀರ್ ನೇತೃತ್ವದ ನಿಯೋಗದಿಂದ ಭೇಟಿ ಕಥೊಲಿಕ್ ಕ್ರೈಸ್ತ ಸಮುದಾಯದಲ್ಲಿ ಪ್ರತೀ ವರ್ಷ ಸೆಪ್ಟೆಂಬರ್ 8ರಂದು ಆಚರಿಸುವ ಕನ್ಯಾ ಮರಿಯಮ್ಮನವರ ಜನ್ಮದಿನದ ಪ್ರಯುಕ್ತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಿಸಬೇಕೆಂದು ಆಗ್ರಹಿಸಿ ಸಚಿವರಾದ ಸನ್ಮಾನ್ಯ ಯು. ಟಿ. ಖಾದರ್ ಫರೀದ್ ಅವರಿಗೆ ಕ್ರೈಸ್ತ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿದ್ದಾರೆ. ಕರ್ನಾಟಕ ಕ್ರೈಸ್ತ ಸಂಘಟನೆಯ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಸ್ಟ್ಯಾನಿ ಪಿಂಟೋ […]

News

ಪೆಂತೆಕೋಸ್ತ್ ಕ್ರೈಸ್ತ ಸಮುದಾಯದ ಸಮಸ್ಯೆಗಳ ಅಧ್ಯಯನಕ್ಕೆ 3 ಸದಸ್ಯರ ಸಮಿತಿ – ಸಚಿವ ಯು.ಟಿ. ಖಾದರ್ ಭರವಸೆ

ಬೆಂಗಳೂರು: ರಾಜ್ಯದ ಕ್ರೈಸ್ತ ಸಮುದಾಯ, ಅದರಲ್ಲೂ ವಿಶೇಷವಾಗಿ ಪೆಂತೆಕೋಸ್ತ್ ಕ್ರೈಸ್ತ ಸಮುದಾಯ ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಹಾಗೂ ಕಾಳಜಿಗಳಿಗೆ ಸ್ಪಂದಿಸಿರುವ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಸನ್ಮಾನ್ಯ ಯು. ಟಿ. ಖಾದರ್ ಫರೀದ್, ಅವರು ಈ ಕುರಿತು ಸವಿಸ್ತಾರವಾಗಿ ಪರಿಶೀಲಿಸಿ ವರದಿ ಸಲ್ಲಿಸಲು ಮೂವರು ಸದಸ್ಯರ ಸಮಿತಿಯನ್ನು ರಚಿಸುವುದಾಗಿ ಭರವಸೆ ನೀಡಿದ್ದಾರೆ. ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಇಂದು ಆಗಸ್ಟ್ 19ರಂದು ಬುಧವಾರ ಬೆಂಗಳೂರಿನಲ್ಲಿರುವ ಸಚಿವರ ಕಚೇರಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜವಾಬ್ದಾರಿ ವಹಿಸಿಕೊಂಡ […]

News

ಹನೂರು ಶೂಟೌಟ್‌ ಪ್ರಕರಣವನ್ನು ನ್ಯಾಯಾಂಗ ತನಿಖೆ ನಡೆಸಲು ಆರ್ಚ್‌ಬಿಷಪ್ ಡಾ. ಪೀಟರ್ ಮಚಾದೊ ಆಗ್ರಹ

ಮೂವರ ಸಾವಿನ ಸತ್ಯ ಹೊರಬರಲಿ; ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನು ಕ್ರಮ ಕೈಗೊಳ್ಳಿ ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಚಿಕ್ಕಲ್ಲೂರು ಮೀಸಲು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಮಹಾ ಧರ್ಮಕ್ಷೇತ್ರದ ಆರ್ಚ್‌ಬಿಷಪ್ ಪರಮ ಪೂಜ್ಯ ಅತೀ ವಂದನೀಯ ಡಾ. ಪೀಟರ್ ಮಚಾದೊ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಘಟನೆಯ ಸಂಪೂರ್ಣ ಸತ್ಯ ಹೊರಬರಲು ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರ ಹಾಗೂ ನಿಷ್ಪಕ್ಷಪಾತ ನ್ಯಾಯಾಂಗ […]

News

ಹನೂರು ಶೂಟೌಟ್ ಪ್ರಕರಣ – SIT ತನಿಖೆ ಹಾಗೂ ₹1 ಕೋಟಿ ಪರಿಹಾರಕ್ಕೆ MLC ಐವನ್ ಡಿಸೋಜ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಅಮಾಯಕರು ಮೃತಪಟ್ಟಿದ್ದಾರೆ ಎಂದು ಆರೋಪಿಸಿ, ಘಟನೆಯ ಸಮಗ್ರ ಹಾಗೂ ಪಾರದರ್ಶಕ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸುವಂತೆ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಅವರು ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಇಂದು ಆಗಸ್ಟ್ 18ರಂದು ಮಂಗಳವಾರ ಮನವಿ ಸಲ್ಲಿಸಿದರು. ಅರಣ್ಯ ಪ್ರದೇಶಕ್ಕೆ ದನಕರು ಹಾಗೂ ಮೇಕೆಗಳನ್ನು ಹುಡುಕಲು ಹೋಗಿ, ಸುಸ್ತಾಗಿ ವಿಶ್ರಾಂತಿ ಪಡೆಯುತ್ತಿದ್ದ ನಾಲ್ವರ ಮೇಲೆ […]

News

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ – ಆರೋಪಿ ಉಮೇಶ್ ಬಂಧನ

ಅಪ್ರಾಪ್ತ ಬಾಲಕನಿಗೆ ಅನುಚಿತವಾಗಿ ವರ್ತಿಸಿ, ಬಳಿಕ ಮನೆಗೆ ತೆರಳಿ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ ಆರೋಪದ ಮೇಲೆ ವಿಟ್ಲ ಪೊಲೀಸರು 53 ವರ್ಷದ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.   ಆಗಸ್ಟ್ 15ರಂದು ಅಳಿಕೆಯಿಂದ ಪುತ್ತೂರು ಕಡೆಗೆ ಬಸ್ಸಿನಲ್ಲಿ ಬರುತ್ತಿದ್ದ ಅಪ್ರಾಪ್ತ ಬಾಲಕನ ಪಕ್ಕದಲ್ಲಿ ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಕುಳಿತು ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಬಳಿಕ ಬಾಲಕ ಮನೆಗೆ ತೆರಳಿದಾಗ ಅಲ್ಲಿಗೂ ಬಂದ ಆರೋಪಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ್ದಾನೆ ಎಂದು […]

News

ಚಾಮರಾಜನಗರ ಶೂಟೌಟ್‌: ‘ಹೊಸ ಚಪ್ಪಲಿ, ಚರ್ಮವಿಲ್ಲದ ಮಾಂಸ’ದ ನಿಗೂಢತೆ – SIT ತನಿಖೆಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಆಗ್ರಹ

ಮೂವರ ಸಾವಿನ ಪ್ರಕರಣದಲ್ಲಿ ಜಪ್ತಿ ವಸ್ತುಗಳೇ ಹುಟ್ಟುಹಾಕಿದ ಹಲವು ಪ್ರಶ್ನೆಗಳು – ನಿಷ್ಪಕ್ಷಪಾತ ತನಿಖೆಗೆ ಕ್ರೈಸ್ತ ಸಂಘಟನೆ ಆಗ್ರಹ ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಧಾಮದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಇದೀಗ ಘಟನಾ ಸ್ಥಳದಲ್ಲಿ ಪತ್ತೆಯಾಗಿರುವ ವಸ್ತುಗಳಿಂದ ಮತ್ತಷ್ಟು ಕುತೂಹಲ ಹಾಗೂ ಅನುಮಾನಗಳಿಗೆ ಕಾರಣವಾಗಿದೆ. ಹೊಸದಾಗಿ ಕಾಣುವ ಚಪ್ಪಲಿಗಳು, ಚೀಲಗಳಲ್ಲಿದ್ದ ಚರ್ಮವಿಲ್ಲದ ಮಾಂಸ ಹಾಗೂ ಇತರ ವಸ್ತುಗಳ ಕುರಿತು ಸ್ಪಷ್ಟತೆ ಅಗತ್ಯವಿದ್ದು, ಇವುಗಳ ಸುತ್ತಲಿನ ನಿಗೂಢತೆಯನ್ನು SIT ತನಿಖೆಯ ಮೂಲಕ ಬಯಲಿಗೆಳೆಯಬೇಕು ಎಂದು ಕ್ರೈಸ್ತ […]

News

ಅಜ್ಜಿಯ ಚಿನ್ನದ ಬಳೆ ಕಸಿದುಕೊಂಡ ಮೊಮ್ಮಗನ ಬಂಧನ

ಮನೆಯಲ್ಲಿ ಒಬ್ಬಂಟಿಯಾಗಿದ್ದ 82 ವರ್ಷದ ವೃದ್ಧೆಯ ಕೈಯಲ್ಲಿದ್ದ ಸುಮಾರು ₹5 ಲಕ್ಷ ಮೌಲ್ಯದ ಎರಡು ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿದ್ದ ಪ್ರಕರಣವನ್ನು ಪುಂಜಾಲಕಟ್ಟೆ ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವೃದ್ಧೆಯ ಮೊಮ್ಮಗನನ್ನೇ ಬಂಧಿಸಿದ್ದಾರೆ. ಬಂಧಿತನಿಂದ ಕಳವು ಮಾಡಲಾಗಿದ್ದ ಎರಡು ಚಿನ್ನದ ಬಳೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತೆಂಕಕಜೆಕಾರು ಉದ್ದದ ಗುಡ್ಡೆ ಎಂಬಲ್ಲಿ ಈ ಘಟನೆ ನಡೆದಿತ್ತು. ಪ್ರಕರಣದ ಪಿರ್ಯಾದಿದಾರ ಸಾದಿಕ್ ಅವರ ತಾಯಿ 82 ವರ್ಷ ಪ್ರಾಯದ ಅವ್ವಮ್ಮ ಅವರು […]

News

ಸೆಪ್ಟೆಂಬರ್ 8ರಂದು ಹರಿಹರ ಆರೋಗ್ಯಮಾತೆಯ ವಾರ್ಷಿಕ ಮಹೋತ್ಸವ

‘ದೀನದಲಿತರ ತಾಯಿ ಮೇರಿ’ಯ ದರ್ಶನಕ್ಕೆ ಹರಿದುಬರಲಿರುವ ಭಕ್ತಸಾಗರ ಶಿವಮೊಗ್ಗ ಧರ್ಮಕ್ಷೇತ್ರಕ್ಕೆ ಒಳಪಟ್ಟ ಹರಿಹರದ ಪ್ರಸಿದ್ಧ ಆರೋಗ್ಯಮಾತೆ ಬಸಿಲಿಕಾದ ವಾರ್ಷಿಕ ಮಹೋತ್ಸವವು ಸೆಪ್ಟೆಂಬರ್ 8ರಂದು ‘ಮೇರಿ – ದೀನದಲಿತರ ತಾಯಿ’ ಎಂಬ ಧ್ಯೇಯವಾಕ್ಯದೊಂದಿಗೆ ಭಕ್ತಿಭಾವ ಹಾಗೂ ಸಂಭ್ರಮದಿಂದ ನಡೆಯಲಿದೆ. ಕರ್ನಾಟಕದ ವಿವಿಧ ಜಿಲ್ಲೆಗಳು, ನೆರೆಯ ರಾಜ್ಯಗಳು ಹಾಗೂ ವಿವಿಧ ಭಾಷಾ ಸಮುದಾಯಗಳಿಂದ ಸಾವಿರಾರು ಭಕ್ತರು ಮಹೋತ್ಸವದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆಗಸ್ಟ್ 30ರಿಂದ 9 ದಿನಗಳ ನೊವೆನಾ ಪ್ರಾರ್ಥನೆ: ಮಹೋತ್ಸವದ ಅಂಗವಾಗಿ ಆಗಸ್ಟ್ 30ರಿಂದ ಸೆಪ್ಟೆಂಬರ್ 7ರವರೆಗೆ ಪ್ರತಿದಿನ ಸಂಜೆ […]

You cannot copy content of this page