ಬಂಟ್ವಾಳದಲ್ಲಿ ಗ್ರಾಮಾಂತರ ಪೊಲೀಸರ ಬೇಟೆ – ಲಕ್ಷಾಂತರ ಮೌಲ್ಯದ MDMA, ಗಾಂಜಾ ಜಪ್ತಿ
ಮೂವರು ಖತರ್ನಾಕ್ ಪೆಡ್ಲರ್‌ಗಳು ವಶಕ್ಕೆ! ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ನಿಷೇಧಿತ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 12ರಂದು ಬುಧವಾರ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಆಲಂಪುರಿ ಸಾಲು ಮರದ ತಿಮ್ಮಕ್ಕ ರಾಷ್ಟ್ರೀಯ ಉದ್ಯಾನವನದ ರಸ್ತೆ ಬಳಿ ರಹಸ್ಯವಾಗಿ ನಡೆಯುತ್ತಿದ್ದ ಡ್ರಗ್ಸ್ ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ವಶಪಡಿಸಿಕೊಂಡ ಸ್ವತ್ತುಗಳು: * MDMA (ಮಾದಕ […]













