November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕುಂದಾಪುರ ಚರ್ಚ್‌ ಎದುರೇ ಐವನ್ ರಿಚರ್ಡ್ ಮಸ್ಕರೇನಸ್ ಅವರ ಬರ್ಬರ ಹತ್ಯೆ –  ಪಿಸ್ತೂಲ್‌ನಿಂದ ಗುಂಡಿಕ್ಕಿ ದುಷ್ಕರ್ಮಿ ಪರಾರಿ

ಕುಂದಾಪುರ ನಗರದ ಮಧ್ಯಭಾಗದಲ್ಲಿರುವ ಹೋಲಿ ರೋಸರಿ ಚರ್ಚ್ ಎದುರಿನ ರಸ್ತೆಯಲ್ಲಿ ಇಂದು ಜುಲಾಯಿ 31ರಂದು ಶುಕ್ರವಾರ ಮುಂಜಾನೆ ಭೀಕರ ಕೊಲೆ ಪ್ರಕರಣವೊಂದು ನಡೆದಿದ್ದು, ವ್ಯಕ್ತಿಯೊಬ್ಬರನ್ನು ಪಿಸ್ತೂಲ್‌ನಿಂದ ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಾರ್ಕೂರು ಕಳ್ಳೂರು ಮೂಲದ 45 ವರ್ಷ ಪ್ರಾಯದ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯೆಯಾದ ದುರದೃಷ್ಟಕರ ವ್ಯಕ್ತಿ. ಘಟನೆಯ ವಿವರ: ವಿವಿಧ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದ ಐವನ್, ತಮ್ಮ ಮೊದಲ ಪತ್ನಿ ಸೆಲ್ಮಾ ಮಸ್ಕರೇನಸ್ ಅವರನ್ನು ತೊರೆದು ಬಾರ್ಕೂರು ಮೂಲದ ಮತ್ತೊಬ್ಬ ಮಹಿಳೆಯೊಂದಿಗೆ ವಾಸಿಸುತ್ತಿದ್ದರು. ಇಂದು ಬೆಳಿಗ್ಗೆ […]

News

ಬೊಂದೆಲ್ ಸಂತ ಲಾರೆನ್ಸ್ ಶಾಲೆಯಲ್ಲಿ ನವೀಕೃತ ಸಭಾಂಗಣ ಲೋಕಾರ್ಪಣೆ – ‘ರೆಸೊನನ್ಸ್–2026’ ಸಾಂಸ್ಕೃತಿಕ ಹಬ್ಬಕ್ಕೆ ಚಾಲನೆ

ಇಲ್ಲಿನ ಸಂತ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆಯ ನವೀಕೃತ ಸಭಾಂಗಣವನ್ನು ಕರ್ನಾಟಕದ ನಿವೃತ್ತ ಶಿಕ್ಷಣ ನಿರ್ದೇಶಕ  ಡಾ. ಸಿಪ್ರಿಯನ್ ಮೊಂತೇರೊ ಅವರು ಭವ್ಯವಾಗಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಶಾಲೆಯ ಸಾಂಸ್ಕೃತಿಕ ಉತ್ಸವ ‘ರೆಸೊನನ್ಸ್–2026’ರ ಅಧಿಕೃತ ಬ್ಯಾನರ್ ಬಿಡುಗಡೆ ಮಾಡುವ ಮೂಲಕ ಪ್ರಖ್ಯಾತ ಭರತನಾಟ್ಯ ಕಲಾವಿದೆ ಕುಮಾರಿ ರೆಮೋನಾ ಎವಿಯೆಟ್ ಪಿರೇರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಸ್ಥೆಯ ಜಂಟಿ ಕಾರ್ಯದರ್ಶಿ ವಂದನೀಯ ಫಾದರ್ ಬೇಸಿಲ್ ವಾಸ್ ಅವರು ನವೀಕೃತ ಸಭಾಂಗಣವನ್ನು ಆಶೀರ್ವದಿಸಿದರು. ಸಾಧಕರಿಗೆ ಸನ್ಮಾನ ಹಾಗೂ ಸ್ಪೂರ್ತಿದಾಯಕ ನುಡಿ: […]

News

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಡಿಜಿಟಲ್ ಕ್ರಾಂತಿ – ಯು.ಟಿ. ಖಾದರ್

ಪೇಪರ್‌ಲೆಸ್ ಆಸ್ಪತ್ರೆ, ಟೆಲಿ-ಐಸಿಯು, ಕುದಿಸಿದ ನೀರು ಕಡ್ಡಾಯ ರಾಹುಲ್ ಗಾಂಧಿ ವಿರುದ್ಧದ ಹೇಳಿಕೆಗೆ ತೀವ್ರ ವಾಗ್ದಾಳಿ ರಾಜ್ಯದ ಸರ್ಕಾರಿ ಆರೋಗ್ಯ ವ್ಯವಸ್ಥೆಯನ್ನು ತಂತ್ರಜ್ಞಾನ ಆಧಾರಿತ, ವೇಗದ ಹಾಗೂ ಜನಸ್ನೇಹಿ ಸೇವೆಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಶೀಘ್ರದಲ್ಲೇ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಪೇಪರ್‌ಲೆಸ್ ಆರೋಗ್ಯ ಸೇವೆ, ಟೆಲಿ-ಐಸಿಯು ವ್ಯವಸ್ಥೆ, ನವಜಾತ ಶಿಶುಗಳ ವಿಶೇಷ ಆರೈಕೆ ಘಟಕಗಳು ಹಾಗೂ ಆಯುಷ್ ಸೇವೆಗಳ ಸಮಗ್ರ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ […]

News

ಮಂಗಳೂರು ವಿವಿ ಪದವಿ ಫಲಿತಾಂಶ ಪ್ರಕಟ – UUCMS ಪೋರ್ಟಲ್‌ನಲ್ಲಿ ಫಲಿತಾಂಶ ವೀಕ್ಷಣೆಗೆ ಅವಕಾಶ

ಮಂಗಳೂರು ವಿವಿ ಪದವಿ ಫಲಿತಾಂಶ ಪ್ರಕಟ – UUCMS ಪೋರ್ಟಲ್‌ನಲ್ಲಿ ಫಲಿತಾಂಶ ವೀಕ್ಷಣೆಗೆ ಅವಕಾಶ ಮಂಗಳೂರು ವಿಶ್ವವಿದ್ಯಾನಿಲಯವು 2026ರ ಜೂನ್ ಮತ್ತು ಜುಲೈ ತಿಂಗಳಿನಲ್ಲಿ ನಡೆಸಿದ್ದ ವಿವಿಧ ಪದವಿ ಕೋರ್ಸ್‌ಗಳ 6ನೇ ಸೆಮಿಸ್ಟರ್ ಹಾಗೂ BHM ಕೋರ್ಸಿನ 8ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶಗಳನ್ನು ಅಧಿಕೃತವಾಗಿ ಪ್ರಕಟಿಸಿದೆ. ವಿದ್ಯಾರ್ಥಿಗಳು UUCMS ಪೋರ್ಟಲ್ ಮೂಲಕ ಲಾಗಿನ್ ಆಗಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ ಎಂದು ವಿಶ್ವವಿದ್ಯಾಲಯದ ಕುಲಪತಿಯವರು ಇಂದು ಜುಲಾಯಿ 30ರಂದು ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. * ಉತ್ತೀರ್ಣರಾದ ವಿದ್ಯಾರ್ಥಿಗಳು: […]

News

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ – ಶಾಸಕ ಯಶ್‌ಪಾಲ್ ಸುವರ್ಣ ಬಂಧನ ಹಾಗೂ ವಜಾಕ್ಕೆ ರಮಾನಾಥ ರೈ ಆಗ್ರಹ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಗಾಂಧಿ ಕುಟುಂಬದ ವಿರುದ್ಧ ಉಡುಪಿಯ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ನೀಡಿರುವ ಪ್ರಚೋದನಕಾರಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಮಾಜಿ ಸಚಿವ ಬಿ. ರಮಾನಾಥ ರೈ, ಅವರ ವಿರುದ್ಧ ತಕ್ಷಣವೇ ಕಾನೂನು ಕ್ರಮ ಜರುಗಿಸಿ ಶಾಸಕ ಸ್ಥಾನವನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಾಬರಿ ಮಸೀದಿಯಂತೆ ರಾಹುಲ್ ಗಾಂಧಿ ಕುಟುಂಬವನ್ನೂ ಧ್ವಂಸಗೊಳಿಸುತ್ತೇವೆ ಎಂಬ ಶಾಸಕರ ಹೇಳಿಕೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಯಶ್‌ಪಾಲ್ ಸುವರ್ಣ […]

News

ಮಹೇಶ್ ಮೋಟಾರ್ಸ್ ಮಾಲಕ ಎ.ಕೆ. ಜಯರಾಮ ಶೇಕ ಅವರ ಪುತ್ರ ಮಹೇಶ್ ಶೇಕ ನಿಧನ

ಕರಾವಳಿಯ ಪ್ರಸಿದ್ಧ ‘ಮಹೇಶ್ ಮೋಟಾರ್ಸ್’ ಮಾಲಕರಾದ ಎ.ಕೆ. ಜಯರಾಮ ಶೇಕ ಅವರ ಪುತ್ರ 49 ವರ್ಷ ಪ್ರಾಯದ ಮಹೇಶ್ ಶೇಕ ಅವರು ಅಲ್ಪಕಾಲದ ಅಸೌಖ್ಯದಿಂದ ಜುಲಾಯಿ 29ರಂದು ಬುಧವಾರ ನಿಧನರಾಗಿದ್ದಾರೆ. ಸರಳ ವ್ಯಕ್ತಿತ್ವ, ಪ್ರೀತಿಯ ನಡವಳಿಕೆ ಹಾಗೂ ಆತ್ಮೀಯ ನಗುವಿನಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದ ಮಹೇಶ್ ಶೇಕ ಅವರ ಅಗಲಿಕೆಗೆ ಬಂಧು-ಮಿತ್ರರು ಹಾಗೂ ಹಿತೈಷಿಗಳು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ, ಮಗಳು ಹಾಗೂ ಸಹೋದರ-ಸಹೋದರಿಯರನ್ನು ಅಗಲಿದ್ದಾರೆ. ಅಂತಿಮ ಸಂಸ್ಕಾರ: ಮೃತರ ವಿಧಿವಿಧಾನಗಳು ಇಂದು […]

News

31 ವರ್ಷಗಳ ಗ್ರಾಹಕ ವಿಶ್ವಾಸ – ಬೆಳ್ತಂಗಡಿಯ ‘ಸೋಜಾ ಎಲೆಕ್ಟ್ರಾನಿಕ್ಸ್’ನಲ್ಲಿ ‘ವಿಡಿಯಂ’ ವಿಶೇಷ ಸರ್ವಿಸ್ ಕ್ಯಾಂಪ್‌ಗೆ ಅದ್ಧೂರಿ ಚಾಲನೆ!

DYSP ರೋಹಿಣಿ ಸಿ.ಕೆ. ಅವರಿಂದ ಕಾರ್ಯಕ್ರಮ ಉದ್ಘಾಟನೆ ಕಳೆದ ಮೂರು ದಶಕಕ್ಕೂ ಹೆಚ್ಚು ಕಾಲ (31 ವರ್ಷ) ಗುಣಮಟ್ಟದ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳು ಹಾಗೂ ಅತ್ಯುತ್ತಮ ಸೇವೆಯ ಮೂಲಕ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಬೆಳೆದುಬಂದಿರುವ ಬೆಳ್ತಂಗಡಿಯ ‘ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್’ ಸಂಸ್ಥೆಯಲ್ಲಿ ‘ವಿಡಿಯಂ’ (Videom) ಕಂಪೆನಿಯ ವಿಶೇಷ ಸರ್ವಿಸ್ ಕ್ಯಾಂಪ್‌ಗೆ ಚಾಲನೆ ನೀಡಲಾಯಿತು. ಜುಲೈ 29ರಂದು ಬುಧವಾರ ನಡೆದ ಸಮಾರಂಭವನ್ನು DYSP ರೋಹಿಣಿ ಸಿ.ಕೆ. ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ‘ಸುದ್ದಿ’ ಸಮೂಹ ಸಂಸ್ಥೆಗಳ ಆಡಳಿತ […]

News

₹82 ಕೋಟಿ ಮೌಲ್ಯದ ಮಾದಕ ವಸ್ತು ಬೆಂಕಿಗಾಹುತಿ ಮಾಡಿದ ಮಂಗಳೂರು ಪೊಲೀಸರು!

ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣದತ್ತ ದೃಢ ಹೆಜ್ಜೆಯಿಟ್ಟಿರುವ ಮಂಗಳೂರು ನಗರ ಪೊಲೀಸರು, ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ ಸುಮಾರು ₹82 ಕೋಟಿ ಮೌಲ್ಯದ ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿಯೊಂದಿಗೆ ಇಂದು ಜುಲಾಯಿ 29ರಂದು ಬುಧವಾರ ವೈಜ್ಞಾನಿಕ ಹಾಗೂ ಪರಿಸರ ಸ್ನೇಹಿ ವಿಧಾನದಲ್ಲಿ ಸುಟ್ಟು ನಾಶಪಡಿಸಿದ್ದಾರೆ. ಮಂಗಳೂರು ನಗರದ ಮುಲ್ಕಿ ಸಮೀಪದ ಕೊಳ್ನಾಡು ಕೈಗಾರಿಕಾ ಪ್ರದೇಶದಲ್ಲಿರುವ ‘ರಾಮ್ಕಿ ಎನರ್ಜಿ ಅಂಡ್ ಎನ್ವಿರಾನ್‌ಮೆಂಟ್ ಲಿಮಿಟೆಡ್’ (Re Sustainability) ಘಟಕದಲ್ಲಿ ‘ಡ್ರಗ್ ಡಿಸ್ಪೋಸಲ್ ಕಮಿಟಿ’ಯ ಸಮ್ಮುಖದಲ್ಲಿ ಈ […]

News

ಶಾಸಕ ಯಶ್‌ಪಾಲ್ ಸುವರ್ಣ ದ್ವೇಷಪೂರಿತ ಹೇಳಿಕೆಗೆ ಆಕ್ರೋಶ

ಕ್ಷಮೆಯಾಚಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೊಹಮ್ಮದ್ ಆಥಿಫ್ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ನೀಡಿರುವ ಅವಹೇಳನಕಾರಿ ಹಾಗೂ ದ್ವೇಷಪೂರಿತ ಹೇಳಿಕೆಯನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದ್ದು, ತಕ್ಷಣವೇ ಬಹಿರಂಗ ಕ್ಷಮೆಯಾಚಿಸದಿದ್ದರೆ ಕಾನೂನು ಹೋರಾಟ ಹಾಗೂ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಉಡುಪಿ ಜಿಲ್ಲಾ ಯುವ […]

News

ಬಂಟ್ವಾಳ ವೃದ್ಧೆ ಬೆನೆಡಿಕ್ಟ್ ಕಾರ್ಲೋ ಬರ್ಬರ ಕೊಲೆ ಪ್ರಕರಣ – ಆರೈಕೆಗಿದ್ದ ಯುವತಿ ಏಲ್ಮಾ ಬರೆಟ್ಟೊ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ

ಇನ್ಸ್ ಪೆಕ್ಟರ್ T.D. ನಾಗರಾಜ್ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ್ದ ದೋಷಾರೋಪಣಾ ಪಟ್ಟಿ ಚಿನ್ನಾಭರಣಕ್ಕಾಗಿ ಆರೈಕೆ ಮಾಡುತ್ತಿದ್ದ ವೃದ್ಧೆಯನ್ನೇ ಉಸಿರುಗಟ್ಟಿಸಿ ಕೊಲೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂವರು ಆರೋಪಿಗಳಿಗೆ ಮಂಗಳೂರಿನ ಮಾನ್ಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಘಟನೆಯ ಹಿನ್ನೆಲೆ: ಬಂಟ್ವಾಳ ತಾಲೂಕಿನ ಅಮ್ಮುಂಜೆ ನಿವಾಸಿಯಾದ 73 ವರ್ಷ ಪ್ರಾಯದ ಬೆನಡಿಕ್ಟ್ ಕಾರ್ಲೋ ಎಂಬ ವೃದ್ಧೆಯ ಆರೈಕೆಗಾಗಿ ಬಂಟ್ವಾಳ ಅಮ್ಟಾಡಿ ನಿವಾಸಿ 23 ವರ್ಷ ಪ್ರಾಯದ ಏಲ್ಮಾ ಪ್ರೆಶ್ಚಿತ್ ಬರೆಟ್ಟೊ […]

You cannot copy content of this page