ದಕ್ಷಿಣ ಕನ್ನಡ ರಸ್ತೆ ಅಪಘಾತ ತಡೆಗೆ ಹೈಟೆಕ್ ಕಣ್ಣು – ಸಂಚಾರ ನಿಯಮ ಉಲ್ಲಂಘಿಸಿದರೆ ನೇರ ಮನೆಗೆ ನೋಟೀಸ್!
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಡೆಯುವ ಹಾಗೂ ಸಂಚಾರ ನಿಯಮಗಳ ಪಾಲನೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಉದ್ದೇಶದಿಂದ ಪೊಲೀಸ್ ಇಲಾಖೆಯು ಮಹತ್ವದ ಕ್ರಮ ಕೈಗೊಂಡಿದೆ. ಅಪಘಾತ ಸಂಭವಿಸುವ ಪ್ರಮುಖ ಹಾಗೂ ಆಯಕಟ್ಟಿನ ಸ್ಥಳಗಳಲ್ಲಿ ಆಧುನಿಕ ತಂತ್ರಜ್ಞಾನದ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, 2026 ಜುಲಾಯಿ 23ರಿಂದ ಇವು ಅಧಿಕೃತವಾಗಿ ಕಾರ್ಯಾಚರಣೆ ಆರಂಭಿಸಿವೆ. ಪ್ರಮುಖ ಮುಖ್ಯಾಂಶಗಳು: * ಯಾವೆಲ್ಲಾ ಠಾಣಾ ವ್ಯಾಪ್ತಿ?: ಮೊದಲ ಹಂತವಾಗಿ ವಿಟ್ಲ, ಉಪ್ಪಿನಂಗಡಿ, ಸುಳ್ಯ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ […]













