ಭೋವಿ ಜನಾಂಗಕ್ಕೆ ಜಾತಿ ಪ್ರಮಾಣ ಪತ್ರ ನಿರಾಕರಣೆ – ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಹಾಗೂ ಅಹೋರಾತ್ರಿ ಪ್ರತಿಭಟನೆಗೆ ಸಾಮಾಜಿಕ ಹೋರಾಟಗಾರ ಪವನ್ ಕುಮಾರ್ ಶಿರ್ವ ಎಚ್ಚರಿಕೆ
ಅವಿಭಾಜ್ಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸುಮಾರು 70,000ಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಭೋವಿ ಜನಾಂಗದವರಿಗೆ ಕಳೆದ 7-8 ವರ್ಷಗಳಿಂದ ಅಧಿಕಾರಿಗಳು ಜಾತಿ ಪ್ರಮಾಣ ಪತ್ರ ನೀಡದೆ ಸತಾಯಿಸುತ್ತಿರುವುದು ಅತ್ಯಂತ ಖಂಡನೀಯ ಎಂದು ಭೋವಿ ಸಮಾಜದ ಪ್ರಮುಖ ಸಾಮಾಜಿಕ ಹೋರಾಟಗಾರರಾದ ಪವನ್ ಕುಮಾರ್ ಶಿರ್ವ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜುಲಾಯಿ 16ರಂದು ಗುರುವಾರ ಕಾಪು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಅವರು, “ಭಾರತ ಸರ್ಕಾರದ ಅಧಿಸೂಚನೆ ಸಂಖ್ಯೆ BC12016/34/76-SCT-5 (ದಿನಾಂಕ 27-07-1997) […]













