ಸರ ಸುಲಿಗೆ ಪ್ರಕರಣವನ್ನು ಭೇದಿಸಿದ ಸುರತ್ಕಲ್ ಪೊಲೀಸರು – ಕುಖ್ಯಾತ ಆರೋಪಿ ಜಾಫರ್ ಬಂಧನ
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮಹಿಳೆಯರನ್ನು ಗುರಿಯಾಗಿಸಿ ನಡೆದಿದ್ದ ಎರಡು ಪ್ರಮುಖ ಸರ ಸುಲಿಗೆ ಪ್ರಕರಣಗಳನ್ನು ಭೇದಿಸುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳವಾಗಿದ್ದ ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿರುವ ಪೊಲೀಸರು, ಆರೋಪಿ 28 ವರ್ಷ ಪ್ರಾಯದ ಮೊಹಮ್ಮದ್ ಅಬ್ದುಲ್ ಜಾಫರ್ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಸುರತ್ಕಲ್‌ನ ಕಾಟಿಪಳ್ಳ 2ನೇ ಬ್ಲಾಕ್ ನಿವಾಸಿಯಾಗಿದ್ದು, ಈತನಿಂದ ಕಳವು ಮಾಡಲಾಗಿದ್ದ ಚಿನ್ನಾಭರಣಗಳನ್ನು ಯಥಾಸ್ಥಿತಿಯಲ್ಲಿ ವಶಕ್ಕೆ ಪಡೆಯಲಾಗಿದೆ. ನಡೆದಿದ್ದೇನು? * ಮೊದಲ ಪ್ರಕರಣ (ಜೂನ್ 26): […]













