ಬಜ್ಪೆ ಬೆಥನಿ ಶಾಲೆಯಲ್ಲಿ ಪರಿಸರ ದಿನಾಚರಣೆ – ಹಸಿರು ಪರಿಸರ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಸಂಕಲ್ಪ
ಬಜ್ಪೆ ಇಲ್ಲಿನ ಬೆಥನಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಪ್ರಕೃತಿಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶಾಲಾ ಆವರಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪರಿಸರ ಆಸಕ್ತರಾದ ಗ್ಲಾಡಿಸ್ ಡಿಸೋಜ ಅವರು ಮಾತನಾಡಿ, “ಪರಿಸರ ಸಂರಕ್ಷಣೆ ಇಂದಿನ ತುರ್ತು ಅಗತ್ಯವಾಗಿದೆ. ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಪರಿಸರ ಸ್ನೇಹಿ ಶೈಲಿಯನ್ನು ಅಳವಡಿಸಿಕೊಳ್ಳಬೇಕು. ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಪ್ರಕೃತಿಯನ್ನು ಸಮತೋಲನದಲ್ಲಿಡುವುದು ನಮ್ಮೆಲ್ಲರ […]













