ಸೂರಿಕುಮೇರು ಜಂಕ್ಷನ್‌ನಲ್ಲಿ ಪಿಕಪ್ ಡಿಕ್ಕಿ – ದಿವ್ಯಾಂಗ ಕೂಲಿ ಕಾರ್ಮಿಕ ದಾರುಣ ಸಾವು
ವಿಟ್ಲ: ರಸ್ತೆ ದಾಟುತ್ತಿದ್ದ ದಿವ್ಯಾಂಗ ಕೂಲಿ ಕಾರ್ಮಿಕರೊಬ್ಬರಿಗೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ದಾರುಣ ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಗಾಣದಪಾಲು ನಿವಾಸಿ 38 ವರ್ಷ ಪ್ರಾಯದ ಪುರುಷೋತ್ತಮ ಪೂಜಾರಿ ಎಂದು ಗುರುತಿಸಲಾಗಿದೆ. ಅವರು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಪುರುಷೋತ್ತಮ ಪೂಜಾರಿಯವರು ಸೂರಿಕುಮೇರು ಜಂಕ್ಷನ್‌ನಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಪಿಕಪ್ […]













