ಸೂರಿಕುಮೇರು ನಿಯಂತ್ರಣ ತಪ್ಪಿ ಖಾಸಗಿ ಬಸ್‌ಗೆ ಗುದ್ದಿದ ಪಿಕಪ್ – ಚಾಲಕ ಪ್ರಾಣಾಪಾಯದಿಂದ ಪಾರು
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಜಂಕ್ಷನ್ ಬಳಿ ಇಂದು ಮಾರ್ಚ್ 31ರಂದು ಮಂಗಳವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ, ಅತೀ ವೇಗದಿಂದ ಬಂದ ಪಿಕಪ್ ವಾಹನವೊಂದು ಖಾಸಗಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಪಿಕಪ್ ವಾಹನದ ಮುಂಭಾಗವು ಸಂಪೂರ್ಣವಾಗಿ ಜಖಂಗೊಂಡಿದ್ದು, ಅದೃಷ್ಟವಶಾತ್ ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಅಪಘಾತಕ್ಕೆ ಅತೀ ವೇಗವೇ ಕಾರಣ? ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ಕಾಮಗಾರಿಯು ಬಹುತೇಕ ಪೂರ್ಣಗೊಂಡಿರುವುದರಿಂದ ರಸ್ತೆಗಳು ಸುಗಮವಾಗಿವೆ. ಆದರೆ, ಇದೇ ಕಾರಣಕ್ಕೆ ವಾಹನ ಸವಾರರು ಮಿತಿಮೀರಿದ ವೇಗದಲ್ಲಿ […]













