ಮಾರ್ಚ್ 21ರಂದು ಮಂಗಳೂರಿನಲ್ಲಿ ‘ಆಳ್ವಾಸ್ ಸಾಂಸ್ಕೃತಿಕ ವೈಭವ’ದ ರಂಗು – ಡಾ. ಎಂ. ಮೋಹನ್ ಆಳ್ವ
ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಮಾರ್ಚ್ 21ರಂದು ಸಾಯಂಕಾಲ 6 ಗಂಟೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿ ಕಲಾವಿದರಿಂದ ‘ಆಳ್ವಾಸ್ ಸಾಂಸ್ಕೃತಿಕ ವೈಭವ’ ಕಾರ್ಯಕ್ರಮ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ತಿಳಿಸಿದ್ದಾರೆ. ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಮಾರ್ಚ್ 12ರಂದು ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮದ ಕುರಿತು ವಿವರಗಳನ್ನು ಹಂಚಿಕೊಂಡರು. ಕಾರ್ಯಕ್ರಮದ ಆಶಯ ಮತ್ತು ಉದ್ದೇಶ: * ಕಲೆಗಳ ಪೋಷಣೆ: ನಮ್ಮ ಸಾಂಸ್ಕೃತಿಕ, ಜನಪದ ಹಾಗೂ […]













