ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ನ್ಯಾಯಾಲಯದ ಕಠಿಣ ಶಿಕ್ಷೆ – ಕಡಬದ ಆರೋಪಿಗೆ 20 ವರ್ಷ ಜೈಲು
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು ₹75,000 ದಂಡ ವಿಧಿಸಿ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪುತ್ತೂರು ಕಾರ್ಯವ್ಯಾಪ್ತಿ) ತೀರ್ಪು ನೀಡಿದೆ. ಕಡಬ ಪೊಲೀಸ್ ಠಾಣೆಯಲ್ಲಿ 2019ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬದ ನೂಜಿಬಾಳ್ತಿಲ ನಿವಾಸಿ 34 ವರ್ಷ ಪ್ರಾಯಾದ ಸದ್ದಾಂ ಶಿಕ್ಷೆಗೊಳಗಾದ ಆರೋಪಿ. ಆರೋಪಿಯು ಅಪ್ರಾಪ್ತ ಬಾಲಕಿಯ ಮನೆಗೆ ತೆರಳಿ ಆಕೆಯ ಇಚ್ಛೆಗೆ […]













