November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಶ್ವ ಶಾಂತಿಗಾಗಿ ಪ್ರಾರ್ಥನೆ ಮತ್ತು ಉಪವಾಸಕ್ಕೆ ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಕರೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಅಶಾಂತಿಯ ಹಿನ್ನೆಲೆಯಲ್ಲಿ, ವಿಶ್ವ ಶಾಂತಿಗಾಗಿ ವಿಶೇಷ ಪ್ರಾರ್ಥನೆ ಮತ್ತು ಉಪವಾಸವನ್ನು ಆಚರಿಸುವಂತೆ ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಪರಮ ಪೂಜ್ಯ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಇಂದು ಮಾರ್ಚ್ 5ರಂದು ಗುರುವಾರ ನೀಡಿದ ಪತ್ರಿಕಾ ಪ್ರಕಟನೆ ಮುಖಾಂತರ ಭಕ್ತಾದಿಗಳಿಗೆ ಕರೆ ನೀಡಿದ್ದಾರೆ. ಭಾರತೀಯ ಕ್ಯಾಥೋಲಿಕ್ ಬಿಷಪ್‌ಗಳ ಒಕ್ಕೂಟದ (CCBI) ಅಧ್ಯಕ್ಷರಾದ ಕಾರ್ಡಿನಲ್ ಡಾ. ಫಿಲಿಪ್ ನೇರಿ ಫೆರಾವೊ ಅವರು ಹೊರಡಿಸಿದ ಸುತ್ತೋಲೆಯನ್ನು ಉಲ್ಲೇಖಿಸಿ ಬಿಷಪ್ ಅವರು ಈ ಮನವಿ […]

News

ಪತ್ರಕರ್ತರ ಮೇಲೆ ಸುಳ್ಳು ಕೇಸ್ – ದೂರುದಾರನಿಗೆ ₹50 ಸಾವಿರ ದಂಡ ವಿಧಿಸಿದ ನ್ಯಾಯಾಲಯ

ಮಾಧ್ಯಮ ಪ್ರತಿನಿಧಿಗಳ ವಿರುದ್ಧ ಆಧಾರರಹಿತ ಹಾಗೂ ಸುಳ್ಳು ದೂರು ದಾಖಲಿಸಿದ್ದ ವ್ಯಕ್ತಿಗೆ ಇಲ್ಲಿನ ನ್ಯಾಯಾಲಯವು ತಕ್ಕ ಶಾಸ್ತಿ ಮಾಡಿದೆ. ಸುಳ್ಳು ಆರೋಪ ಹೊರಿಸಿದ ಬಸನಗೌಡ ಪಾಟೀಲ ಎಂಬುವವರಿಗೆ ಬಾಗಲಕೋಟೆಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯವು 50 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ. ಪ್ರಕರಣದ ಹಿನ್ನೆಲೆ ಏನು? ಯೂಟ್ಯೂಬ್ ಚಾನೆಲ್ ಪ್ರತಿನಿಧಿ ಎಂದು ಹೇಳಿಕೊಂಡಿದ್ದ ಬಸನಗೌಡ ಪಾಟೀಲ, ಬಿಟಿಡಿಎ ಎದುರು ಪ್ರತಿಭಟನೆ ನಡೆಯುತ್ತಿದ್ದ ವೇಳೆ ಪತ್ರಕರ್ತರು ತನ್ನ ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ ಮತ್ತು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು […]

News

ಶೈಕ್ಷಣಿಕ ಕ್ಷೇತ್ರದಲ್ಲಿ ಕೆನರಾ ಕಾಲೇಜಿನ ಹೊಸ ದಾಖಲೆ – ಸ್ವಾಯತ್ತ ಸಂಸ್ಥೆಯಾಗಿ ಘೋಷಣೆ

ಮಂಗಳೂರು ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಕೆನರಾ ಕಾಲೇಜು 2025-26ನೇ ಶೈಕ್ಷಣಿಕ ಸಾಲಿನಿಂದ ‘ಸ್ವಾಯತ್ತ ಸ್ಥಾನಮಾನ’ (Autonomous Status) ಪಡೆದುಕೊಂಡಿದೆ ಎಂದು ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಅಧಿಕೃತವಾಗಿ ಘೋಷಿಸಿದೆ. ಕಳೆದ ಐದು ದಶಕಗಳಿಂದ ಮೌಲ್ಯಾಧಾರಿತ ಶಿಕ್ಷಣಕ್ಕೆ ಹೆಸರಾಗಿರುವ ಈ ಸಂಸ್ಥೆಯ ಪಯಣದಲ್ಲಿ ಇದು ಅತ್ಯಂತ ಮಹತ್ವದ ಮೈಲುಗಲ್ಲಾಗಿದೆ. ಐದು ದಶಕಗಳ ಶೈಕ್ಷಣಿಕ ಶ್ರೇಷ್ಠತೆ: 1973ರಲ್ಲಿ ಸ್ಥಾಪನೆಯಾದ ಕೆನರಾ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಪರ್ಯಾಯ ಹೆಸರಾಗಿ ಬೆಳೆದಿದೆ. ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ […]

News

ಪುತ್ತೂರು ರಿಲಯನ್ಸ್ ಮಾಲ್ ಬಳಿ ಪಿಸ್ತೂಲ್ ತೋರಿಸಿ ಶೂಟ್ ಮಾಡಲು ಯತ್ನ – 19ರ ತರುಣ ಪೊಲೀಸ್ ವಶಕ್ಕೆ

ಪುತ್ತೂರು ನಗರದ ರಿಲಯನ್ಸ್ ಮಾಲ್ ಬಳಿ ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿದಂತೆ, ಪುತ್ತೂರು ನಗರ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ 19 ವರ್ಷದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯ ವಿವರ: ದಿನಾಂಕ 02-03-2026 ರಂದು ಮಧ್ಯಾಹ್ನ ಕೆಮ್ಮಿಂಜೆ ನಿವಾಸಿ 42 ವರ್ಷ ಪ್ರಾಯದ ಅಬ್ದುಲ್ ಹಕೀಂ ಎಂಬವರು ಪುತ್ತೂರಿನಿಂದ ಕೂರ್ನಡ್ಕಕ್ಕೆ ತಮ್ಮ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಪುತ್ತೂರು ರಿಲಯನ್ಸ್ ಮಾಲ್ ಸಮೀಪ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಅಪರಿಚಿತ […]

News

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ 10 ಕೋಟಿ ರೂಪಾಯಿ ಅನುದಾನ

ಮಳೆ ಹಾನಿ ಕಾಮಗಾರಿಗಳಿಗೆ MLC ಐವನ್ ಡಿಸೋಜ ಚಾಲನೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವಿವಿಧ ಭಾಗಗಳಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ಪುನರ್ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದಿಂದ 10 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ MLC ಐವನ್ ಡಿಸೋಜ ತಿಳಿಸಿದ್ದಾರೆ. ಈ ಅನುದಾನದಡಿ ಸುಮಾರು 18 ಪ್ರಮುಖ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಮಳೆಗಾಲ ಆರಂಭವಾಗುವ ಮೊದಲೇ ಈ ಎಲ್ಲಾ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸುವಂತೆ ಅವರು […]

News

P.A. First Grade College Student Clinches Top Rank in Mangalore University Exams

In a stellar display of academic prowess, Ayshath Luthfa Naja K.A. of P.A. First Grade College has secured the First Rank in the B.Sc. (Food, Nutrition & Dietetics) examinations conducted by Mangalore University for the academic year 2025. Exceptional Academic Performance: Luthfa’s achievement is marked by an extraordinary aggregate score of 92.75%, securing 4,220 marks […]

News

ಬ್ರಹ್ಮರಕೂಟ್ಲು ಟೋಲ್  ತೆರವಿಗೆ ಆಗ್ರಹಿಸಿ ರಮಾನಾಥ ರೈ ನೇತೃತ್ವದಲ್ಲಿ ಬೃಹತ್ ಧರಣಿ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಗಳನ್ನು ಗಾಳಿಗೆ ತೂರಿ ಕಳೆದ 23 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಬ್ರಹ್ಮರಕೂಟ್ಲು ಟೋಲ್ ಗೇಟ್ ಅನ್ನು ತಕ್ಷಣವೇ ಮುಚ್ಚಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಇಂದು ಮಾರ್ಚ್ 3ರಂದು ಮಂಗಳವಾರ ಸಾಮೂಹಿಕ ಧರಣಿ ನಡೆಸಲಾಯಿತು. ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಟೋಲ್ ಪ್ಲಾಜಾ ಬಳಿಯೇ ಈ ಪ್ರತಿಭಟನೆ ನಡೆಯಿತು. ಹೋರಾಟದ ಪ್ರಮುಖ ಅಂಶಗಳು: * ಅವೈಜ್ಞಾನಿಕ ಕಾರ್ಯಾಚರಣೆ: ಧರಣಿ […]

News

ಉಳ್ಳಾಲದ ಮಸೀದಿ ಬಳಿ ಬಾಂಬ್ ಸ್ಫೋಟದ ಬೆದರಿಕೆ ಹಾಕಿದ್ದ ಆರೋಪಿಯ ಬಂಧನ

ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ ಸಾಮಾಜಿಕ ಜಾಲತಾಣಗಳಲ್ಲಿ ಉಳ್ಳಾಲದ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಹಂಚಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ದಿನಾಂಕ 02-03-2026 ರಂದು ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ “Support madi bro Ullal masjid hathira bomb blast madthini” ಎಂಬ ಆಕ್ಷೇಪಾರ್ಹ ಸಂದೇಶವನ್ನು ಹರಡಿ ಸಾರ್ವಜನಿಕರಲ್ಲಿ ಭಯ ಭೀತಿ ಹುಟ್ಟಿಸಲು ಪ್ರಯತ್ನಿಸಲಾಗಿತ್ತು. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಕೈಗೊಂಡಿದ್ದರು. ಕಾರ್ಯಾಚರಣೆಯ […]

News

ಪುತ್ತೂರಿನಲ್ಲಿ ತೀರಾ ಕೆಳಮಟ್ಟದಲ್ಲಿ ವಿಮಾನ ಹಾರಾಟ

ಸಾರ್ವಜನಿಕರೇ ಆತಂಕ ಬೇಡ, ಇದು ಭೂಗರ್ಭ ಸಮೀಕ್ಷೆ ಕಳೆದ ಕೆಲವು ದಿನಗಳಿಂದ ಪುತ್ತೂರು ಪರಿಸರದಲ್ಲಿ ವಿಮಾನವೊಂದು ತೀರಾ ಕೆಳಮಟ್ಟದಲ್ಲಿ ಹಾರಾಟ ನಡೆಸುತ್ತಿರುವುದು ಸಾರ್ವಜನಿಕರಲ್ಲಿ ಕುತೂಹಲ ಹಾಗೂ ಆತಂಕಕ್ಕೆ ಕಾರಣವಾಗಿತ್ತು. ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣ ಇರುವ ಹಿನ್ನೆಲೆಯಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಈ ವಿಮಾನದ ಬಗ್ಗೆ ಹತ್ತಾರು ಅಂತೆ-ಕಂತೆಗಳ ಸುದ್ದಿಗಳು ಹರಿದಾಡುತ್ತಿದ್ದವು. ಈ ಎಲ್ಲಾ ಸಂಶಯಗಳಿಗೆ ಇದೀಗ ತೆರೆ ಬಿದ್ದಿದೆ. ಏನಿದು ವಿಮಾನ ಹಾರಾಟ? ಪುತ್ತೂರು ವ್ಯಾಪ್ತಿಯಲ್ಲಿ ಕಂಡುಬಂದಿರುವ ಈ ವಿಮಾನವು ಯಾವುದೇ ಅಪಾಯಕಾರಿ ಅಥವಾ ರಕ್ಷಣಾ ಪಡೆಗೆ ಸೇರಿದ […]

News

ಮಧ್ಯಪ್ರಾಚ್ಯ ಯುದ್ಧಭೀತಿ : ಅನಿವಾಸಿ ಭಾರತೀಯರ ರಕ್ಷಣೆಗೆ ಕೇಂದ್ರ ತುರ್ತು ಕ್ರಮ ಕೈಗೊಳ್ಳಲಿ – ಅಸ್ಮ ಹಸೈನಾರ್ ಆಗ್ರಹ

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸದ್ಯ ತಲೆದೋರಿರುವ ಯುದ್ಧದ ಭೀತಿಯಿಂದಾಗಿ ಅಲ್ಲಿನ ಅನಿವಾಸಿ ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂಧಿಗ್ಧ ಪರಿಸ್ಥಿತಿಯಲ್ಲಿರುವ ಭಾರತೀಯರ, ವಿಶೇಷವಾಗಿ ಮಹಿಳೆಯರು ಮತ್ತು ಕರಾವಳಿ ಕನ್ನಡಿಗರ ಕುಟುಂಬಗಳ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ತಕ್ಷಣವೇ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಸ್ಮ ಹಸೈನಾರ್ ತಾಳಿತ್ತನೂಜಿ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಯುದ್ಧಪೀಡಿತ ಪ್ರದೇಶಗಳಲ್ಲಿರುವ ಭಾರತೀಯರ ಸುರಕ್ಷಿತ ಸ್ಥಳಾಂತರ, ಅಗತ್ಯ ನೆರವು ಮತ್ತು ತುರ್ತು ಬೆಂಬಲವನ್ನು ವಿಳಂಬವಿಲ್ಲದೆ […]

You cannot copy content of this page