ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ಲೋಕೋಪಯೋಗಿ ಇಲಾಖೆಯ ಎಸ್‌ಡಿಎ – ಲಂಚ ಸ್ವೀಕರಿಸುವಾಗ ಬಂಧನ
ಸರ್ಕಾರಿ ಕಾಮಗಾರಿಗಳ ಬಿಲ್ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಲೋಕೋಪಯೋಗಿ ಇಲಾಖೆಯ ಸಿಬ್ಬಂದಿಯೊಬ್ಬರು ಇಂದು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಂಗಳೂರಿನ ವಿದ್ಯುತ್ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿಯ ಎಸ್‌ಡಿಎ (SDA) ಸಂಪತ್ ಬಂಧಿತ ಆರೋಪಿ. ಘಟನೆಯ ಹಿನ್ನೆಲೆ: ದೂರುದಾರರು ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಪ್ರಥಮ ದರ್ಜೆ ಇಲೆಕ್ಟ್ರಿಕಲ್ ಗುತ್ತಿಗೆದಾರರಾಗಿದ್ದಾರೆ. ಇವರು 2025ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್‌ಗಳಲ್ಲಿ ದಾರಿ ದೀಪ ವಿಸ್ತರಣೆಯ ಸರ್ಕಾರಿ ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದರು. ಈ ಕೆಲಸದ ಬಿಲ್ […]













