ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ 15 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಬಂಧನ
ವಂಚನೆ ಮತ್ತು ವಿಶ್ವಾಸದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ದೀರ್ಘ ಕಾಲದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಳ್ಳಾಲ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ ವಿವರ: ಬಂಧಿತ ಆರೋಪಿಯನ್ನು 48 ವರ್ಷ ಪ್ರಾಯದ ಲಕ್ಷ್ಮೀಶಬಾಬು ಎಂದು ಗುರುತಿಸಲಾಗಿದೆ. ಈತನ ವಿರುದ್ಧ 2011 ರಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 405 (ವಿಶ್ವಾಸದ್ರೋಹ), 420 (ವಂಚನೆ), 406 ಮತ್ತು 120(ಬಿ) (ಸಂಚು) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು (Cr No: 183/2011). ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದ ಈತ, […]













