November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೆಪಿಸಿಸಿ ಕಾನೂನು–ಮಾನವ ಹಕ್ಕು–RTI ವಿಭಾಗದ ಬಂಟ್ವಾಳ ಕ್ಷೇತ್ರಾಧ್ಯಕ್ಷರಾಗಿ ನೋಟರಿ ಸುರೇಶ್ ಪೂಜಾರಿ ನೇಮಕ

ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕುಗಳ ವಿಭಾಗದ ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾಗಿ ಬಂಟ್ವಾಳ ಬಾರ್ ಅಸೋಸಿಯೇಶನ್‌ನ ಮಾಜಿ ಅಧ್ಯಕ್ಷ, ನೋಟರಿ ಹಾಗೂ ನ್ಯಾಯವಾದಿ ಸುರೇಶ್ ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅನುಮೋದನೆಯೊಂದಿಗೆ, ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕುಗಳ ವಿಭಾಗದ ರಾಜ್ಯಾಧ್ಯಕ್ಷ ಸಿ.ಎಂ. ಧನುಂಜಯ ಅವರ ಆದೇಶದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಮನೋಜ್ ರಾಜ್ ರಾಜೀವ ಅವರು ಈ ನೇಮಕಾತಿ ಆದೇಶ […]

News

ಸೂರಿಕುಮೇರು ಬಳಿ ಡಿವೈಡರ್ ಹತ್ತಿದ KSRTC ಬಸ್  

ಭಾರೀ ಅಪಾಯದಿಂದ ಪ್ರಯಾಣಿಕರು ಪಾರು ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ KSRTC ಬಸ್ ಒಂದು ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿ ನಿಂತ ಘಟನೆ ನಡೆದಿದೆ. ಆದಿತ್ಯವಾರ ರಾತ್ರಿ ಮತ್ತು ಸೋಮವಾರ ಬೆಳಗ್ಗಿನ ನಡುವೆ ಈ ಘಟನೆ ನಡೆದಿದ್ದು, ಬಸ್‌ಗೆ ಭಾಗಶಃ ಹಾನಿಯಾಗಿದೆ. ಅತೀವೇಗದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಡಿವೈಡರ್ ಮೇಲೆ ಹತ್ತಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಘಟನೆಯಿಂದ ಕೆಲಕಾಲ ರಾಷ್ಟ್ರೀಯ […]

News

ಇನೋವಾ ಕಾರು ಖರೀದಿ ನೆಪದಲ್ಲಿ ₹8 ಲಕ್ಷ ವಂಚನೆ – ಹಣ ಕೇಳಿದಾಗ ಕೊಲೆ ಬೆದರಿಕೆ

ಆರೋಪಿಗಳು ಸೌದಿ–ಖತಾರ್‌ಗೆ ಪರಾರಿ ಆರೋಪ ಇನೋವಾ ಕಾರು ಖರೀದಿ ಮಾಡುವ ನೆಪದಲ್ಲಿ ₹8 ಲಕ್ಷಕ್ಕೂ ಅಧಿಕ ಮೊತ್ತ ವಂಚನೆ ಮಾಡಿರುವ ಆರೋಪ ಮಂಗಳೂರಿನ ಪಾಂಡೇಶ್ವರ ಮೂಲದ ತಾಯಿ–ಮಗಳ ವಿರುದ್ಧ ಕೇಳಿಬಂದಿದೆ. ವಂಚನೆಗೆ ಒಳಗಾದ ಅಶ್ರಫ್ ಎಂಬವರು (MRPL ಉದ್ಯೋಗಿ) ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ಇದುವರೆಗೂ ಯಾವುದೇ ಪರಿಣಾಮಕಾರಿ ಕಾನೂನು ಕ್ರಮ ಜರುಗಿಸಿಲ್ಲ ಎಂದು ಅವರು ಆರೋಪಿಸಿದ್ದಾರೆ. ಪೀಡಿತನ ಸ್ನೇಹಿತ ನಾದ ಗಂಗಾಧರ ಅವರು ಹರಿಯಾಣ ರಾಜ್ಯದಿಂದ HR-83-0630 ಸಂಖ್ಯೆಯ ಇನೋವಾ ಕಾರನ್ನು ಖರೀದಿಸಿ ತಂದಿದ್ದರು. […]

News

ಕ್ರೀಡೆ ಒತ್ತಡ ನಿವಾರಣೆಗೆ ಪರಿಣಾಮಕಾರಿ ಮಾರ್ಗ – ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ

ಪೊಲೀಸರು ಹಾಗೂ ಪತ್ರಕರ್ತರು ದಿನನಿತ್ಯವೂ ಒತ್ತಡದ ಮಧ್ಯೆ ಕೆಲಸ ನಿರ್ವಹಿಸುವ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಸಮಯ ಮೀಸಲಿಡುವುದರಿಂದ ಮಾನಸಿಕ ಹಾಗೂ ದೈಹಿಕ ಒತ್ತಡವನ್ನು ಪರಿಣಾಮಕಾರಿಯಾಗಿ ನಿವಾರಿಸಬಹುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಕದ್ರಿಯ ಕೆ.ಪಿ.ಟಿ. ಮೈದಾನದಲ್ಲಿ ಭಾನುವಾರ ನಡೆದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ […]

News

ಒಕ್ಕುಪೆನ್ಸಿ ಸರ್ಟಿಫಿಕೇಟ್ ಇಲ್ಲದ ಮನೆಗಳಿಗೆ ಬೆಸ್ಕಾಂ ಶಾಕ್ – ವಿದ್ಯುತ್ ಸಂಪರ್ಕ ಸ್ಥಗಿತ, ಅಕ್ರಮ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಒಕ್ಕುಪೆನ್ಸಿ ಸರ್ಟಿಫಿಕೇಟ್ (OC) ಪಡೆಯದೇ ಮನೆ ನಿರ್ಮಿಸಿ ವಾಸಕ್ಕೆ ಪ್ರವೇಶಿಸಿದವರಿಗೆ ಬೆಸ್ಕಾಂ ಬಿಗ್ ಶಾಕ್ ನೀಡಿದೆ. OC ಇಲ್ಲದ ಮನೆಗಳಿಗೆ ನೀಡಲಾಗಿದ್ದ ವಿದ್ಯುತ್ ಸಂಪರ್ಕವನ್ನು ಬೆಸ್ಕಾಂ ಸ್ಥಗಿತಗೊಳಿಸಿದ್ದು, ಅಕ್ರಮ ವಿದ್ಯುತ್ ಬಳಕೆಯ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ OC ಇಲ್ಲದೆ ವಿದ್ಯುತ್ ಬಳಸುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಏಪ್ರಿಲ್‌ನಿಂದ OC ಕಡ್ಡಾಯವಾಗಿದ್ದರೂ, ನಿರ್ಮಾಣ ಹಂತದಲ್ಲಿದ್ದ ಅನೇಕ ಮನೆಗಳು ನಂತರ ವಾಸಕ್ಕೆ ಪ್ರವೇಶಿಸಿದ್ದರಿಂದ ಅಕ್ರಮ ವಿದ್ಯುತ್ ಬಳಕೆಯ ಪ್ರಕರಣಗಳು ಹೆಚ್ಚಾಗಿವೆ ಎಂದು […]

News

ಫೆಬ್ರವರಿ 14–15ರಂದು ಜಪ್ಪಿನಮೊಗರುವಿನಲ್ಲಿ 16ನೇ ವರ್ಷದ ಹೊನಲು ಬೆಳಕಿನ ಜಯ–ವಿಜಯ ಜೋಡುಕೆರೆ ಕಂಬಳ

ಮನ್ಕುತೋಟಗುತ್ತು ಹಾಗೂ ನಾಡಾಜೆಗುತ್ತು ಇವರ ಸ್ಮರಣಾರ್ಥ ನಗರದ ಜಪ್ಪಿನಮೊಗರುವಿನಲ್ಲಿ 16ನೇ ವರ್ಷದ ಹೊನಲು ಬೆಳಕಿನ ಜಯ–ವಿಜಯ ಜೋಡುಕೆರೆ ಕಂಬಳ ಫೆಬ್ರವರಿ 14 ಮತ್ತು 15ರಂದು ಭವ್ಯವಾಗಿ ನಡೆಯಲಿದೆ ಎಂದು ಕಂಬಳ ಸಮಿತಿ ಗೌರವಾಧ್ಯಕ್ಷ ಹಾಗೂ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ. ವೇದವ್ಯಾಸ್ ಕಾಮತ್ ಅವರು ತಿಳಿಸಿದ್ದಾರೆ. ಅವರು ಮಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಫೆಬ್ರವರಿ 14ರಂದು ಬೆಳಿಗ್ಗೆ 8.30ಕ್ಕೆ ಶ್ರೀ ಅನಂತಪದ್ಮನಾಭ ಅಸ್ರಣ್ಣರ ಆಶೀರ್ವಚನದೊಂದಿಗೆ ವೇದಮೂರ್ತಿ ಬ್ರಹ್ಮಶ್ರೀ ವಿಠಲದಾಸ್ ತಂತ್ರಿವರ್ಯರಿಂದ […]

News

ದೆಹಲಿಯಲ್ಲಿ ಕ್ರೈಸ್ತ ಮುಖಂಡರ ಶಾಂತಿಯುತ ಸಾಂಕೇತಿಕ ಪ್ರತಿಭಟನೆ – AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಭಾಗವಹಿಸುವುದು ಖಚಿತ

ಪ್ರತಿಭಟನೆಯ ಬಳಿಕ ರಾಷ್ಟ್ರಪತಿ ಹಾಗೂ ಪ್ರಧಾನಿಯವರಿಗೆ ಮನವಿ ಹಸ್ತಾಂತರ ಭಾರತದ ಸಾರ್ವಭೌಮತೆಗೆ ಧಕ್ಕೆಯಾಗುವಂತೆ ಹಾಗೂ ದೇಶದ ಕ್ರೈಸ್ತ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯದೊಂದಿಗೆ, ಫೆಬ್ರವರಿ 2ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ಜಂತರ್ ಮಂತರ್‌ನಲ್ಲಿ ಕ್ರೈಸ್ತ ಸಮುದಾಯದ ಮುಖಂಡರಿಂದ ಶಾಂತಿಯುತ ಸಾಂಕೇತಿಕ ಮೌನ ಪ್ರತಿಭಟನೆ ಆಯೋಜಿಸಲಾಗಿದೆ. ಈ ಪ್ರತಿಭಟನೆಯಲ್ಲಿ ಅಖಿಲ ಭಾರತ ಕ್ರೈಸ್ತ ಒಕ್ಕೂಟ (AICU) ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಅವರು ಪ್ರಮುಖವಾಗಿ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ. […]

News

ಜೀವಾವಧಿ ಕೈದಿಗಳ ನಡುವೆ ಜೈಲಿನಲ್ಲಿ ಅರಳಿದ ಪ್ರೇಮ: ಮದುವೆಗೆ 15 ದಿನಗಳ ಪೆರೋಲ್ ಮಂಜೂರು

ಜೈಪುರದ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಇಬ್ಬರು ಕೈದಿಗಳ ನಡುವೆ ಪ್ರೇಮಾಂಕುರವಾಗಿದ್ದು, ಇದೀಗ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಮುಂದಾಗಿರುವುದು ಎಲ್ಲರ ಗಮನ ಸೆಳೆದಿದೆ. ಮದುವೆ ನಡೆಸುವ ಉದ್ದೇಶದಿಂದ ನ್ಯಾಯಾಲಯದ ಆದೇಶದ ಮೇರೆಗೆ ದಂಪತಿಗೆ 15 ದಿನಗಳ ಪೆರೋಲ್ ಮಂಜೂರಾಗಿದೆ. ಡೇಟಿಂಗ್ ಆ್ಯಪ್ ಮೂಲಕ ವ್ಯಕ್ತಿಯನ್ನು ಬಲೆಗೆ ಬೀಸಿ ಹತ್ಯೆ ಮಾಡಿ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿದ್ದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಪ್ರಿಯಾ ಸೇಠ್ (34) ಹಾಗೂ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆಯ ಪತಿ ಮತ್ತು ಮಗುವನ್ನು ಹತ್ಯೆ […]

News

ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳವು ಯತ್ನ ಹಾಗೂ ಗುಂಪು ಹಲ್ಲೆ – ಎರಡು ಪ್ರತ್ಯೇಕ ಪ್ರಕರಣ ದಾಖಲು

ಬೆಳ್ತಂಗಡಿ ತಾಲೂಕು ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳವು ಯತ್ನ ಹಾಗೂ ಅದರ ನಂತರ ನಡೆದ ಗುಂಪು ಹಲ್ಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಜನವರಿ 20ರಂದು ಮಂಗಳವಾರ ಬೆಳಗ್ಗಿನ ಜಾವ 02.10 ರಿಂದ 02.30 ಗಂಟೆಯ ಅವಧಿಯಲ್ಲಿ ಬೆಳ್ತಂಗಡಿ ತಾಲೂಕು, ಮರೋಡಿ ಗ್ರಾಮದ ಪಳಾರಗೋಳಿ ಎಂಬಲ್ಲಿ ಮರೋಡಿ ಗ್ರಾಮ ನಿವಾಸಿ 22 ವರ್ಷ ಪ್ರಾಯದ ದೇವಿಪ್ರಸಾದ್, ಅವರ ಮನೆ ಹತ್ತಿರದ ಮೋಯಿದಿನ್ ನಾಸೀರ್ ಹಾಗೂ ಅಬ್ದುಲ್ ಸಮದ್ […]

News

ಸಂದೇಶ ಪ್ರಶಸ್ತಿಗಳು–2026 – ಮೌಲ್ಯಾಧಾರಿತ ಶ್ರೇಷ್ಠತೆ, ಸಾಂಸ್ಕೃತಿಕ ಸಂವೇದನೆ ಮತ್ತು ಸಾಮಾಜಿಕ ಬದ್ಧತೆಯ ಭವ್ಯ ಸಂಭ್ರಮ

ಸೃಜನಶೀಲತೆ, ಮಾನವೀಯ ಮೌಲ್ಯಗಳು ಮತ್ತು ಸಮಾಜಮುಖಿ ಬದ್ಧತೆಯನ್ನು ಉತ್ತೇಜಿಸುವ ಉದ್ದೇಶದಿಂದ ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನ ಆಯೋಜಿಸಿದ ಸಂದೇಶ ಪ್ರಶಸ್ತಿಗಳು–2026 ಕಾರ್ಯಕ್ರಮವು ಜನವರಿ 21ರಂದು ಬುಧವಾರ ಮಂಗಳೂರಿನ ಸಂದೇಶ ಸಂಸ್ಥೆ ಆವರಣದಲ್ಲಿ ಅತ್ಯಂತ ಭವ್ಯತೆ ಮತ್ತು ಗಂಭೀರತೆಯೊಂದಿಗೆ ನೆರವೇರಿತು. ಕಲೆ, ಸಾಹಿತ್ಯ, ಶಿಕ್ಷಣ, ಮಾಧ್ಯಮ ಹಾಗೂ ಸಾಮಾಜಿಕ ಸೇವಾ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿದ ಸಾಧಕರನ್ನು ಗೌರವಿಸುವ ಮೂಲಕ ಮೌಲ್ಯಯುತ ಸಮಾಜ ನಿರ್ಮಾಣದ ಬಲವಾದ ಸಂದೇಶವನ್ನು ಈ ಸಮಾರಂಭ ಸಾರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬಳ್ಳಾರಿ […]

You cannot copy content of this page