November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜನವರಿ 25ರಂದು ಮಂಗಳೂರಿನಲ್ಲಿ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವು ಜನವರಿ 25ರಂದು ಭಾನುವಾರ ಬೆಳಗ್ಗೆ 9 ಗಂಟೆಗೆ ನಗರದ ಕದ್ರಿಯ ಕೆ.ಪಿ.ಟಿ. ಮೈದಾನದಲ್ಲಿ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಹಾಗೂ ಕೆ.ಪಿ.ಟಿ.ಯ ಪ್ರಾಂಶುಪಾಲ ಹರೀಶ್ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ […]

News

ಮಾನವೀಯತೆಯ ನೂರು ವಸಂತಗಳು – ಮಂಗಳೂರಿನಲ್ಲಿ ಎಸ್.ಎಸ್.ವಿ.ಪಿ. ಶತಮಾನೋತ್ಸವ ಸಮಾರೋಪದ ಭವ್ಯ ಸಂಭ್ರಮ

ಜನವರಿ 25ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆಂಷನ್ ಸೆಂಟರ್ ಸಭಾಂಗಣದಲ್ಲಿ ಜರುಗಲಿರುವ ಕಾರ್ಯಕ್ರಮ ಎಸ್‌.ಎಸ್‌.ವಿ‌.ಪಿ. ಎಂದು ಜನಪ್ರಿಯವಾಗಿರುವ ಅಂತರಾಷ್ಟ್ರೀಯ ಸೇವಾ ಸಂಸ್ಥೆ ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿ ಮಂಗಳೂರು ಕ್ಯಾಥೊಲಿಕ್ ಧರ್ಮಸಭೆಯಲ್ಲಿ ತನ್ನ ಸೇವಾ ಪಯಣದ ನೂರು ವರ್ಷಗಳ ಸಾರ್ಥಕ ಸಂಭ್ರಮವನ್ನು ಅತ್ಯಂತ ಭಕ್ತಿಭಾವ ಮತ್ತು ಘನತೆಯಿಂದ ಆಚರಿಸುತ್ತಿದೆ. ಈ ಐತಿಹಾಸಿಕ ಶತಮಾನೋತ್ಸವದ ಸಮಾರೋಪ ಸಮಾರಂಭವು ಜನವರಿ 25ರ ಭಾನುವಾರ ಮಂಗಳೂರಿನ ಫಾದರ್ ಮುಲ್ಲರ್ ಕನ್ವೆಂಷನ್ ಸೆಂಟರ್ ಸಭಾಂಗಣದಲ್ಲಿ ಜರುಗಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಕ್ಷೇತ್ರದ […]

News

ಸೂರಿಕುಮೇರು ಬದ್ರಿಯಾ ಜುಮ್ಮಾ ಮಸೀದಿಗೆ ನೂತನ ಅಧ್ಯಕ್ಷರಾಗಿ ಉದ್ಯಮಿ ಎಸ್.ಎ. ಇಸ್ಮಾಯಿಲ್ ಆಯ್ಕೆ

ಸೂರಿಕುಮೇರು ಬದ್ರಿಯಾ ಜುಮ್ಮಾ ಮಸೀದಿಯ ವಾರ್ಷಿಕ ಮಹಾಸಭೆ ಶುಕ್ರವಾರ ಮದ್ರಸಾ ಹಾಲ್‌ನಲ್ಲಿ ನಡೆಯಿತು. ಸಭೆಗೆ ಮಸೀದಿ ಅಧ್ಯಕ್ಷ ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಅಮೀರುದ್ದೀನ್ ಹಾಗೂ ಜೊತೆಯ ಕಾರ್ಯದರ್ಶಿ ಕರೀಂ ನೆಲ್ಲಿ ವರದಿ ಮತ್ತು ಲೆಕ್ಕಪತ್ರಗಳನ್ನು ಮಂಡಿಸಿದರು. ಖತೀಬ್ ಹಸೈನಾರ್ ಸಅದಿ ಪೆರ್ಲ ದುಆ ನೆರವೇರಿಸಿದರು. ಸಭೆಯ ಅನುಮೋದನೆ ಪಡೆದು ಹಾಲಿ ಸಮಿತಿಯನ್ನು ಬರ್ಖಾಸ್ತುಗೊಳಿಸಿ ನೂತನ ಆಡಳಿತ ಸಮಿತಿಯನ್ನು ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ಉದ್ಯಮಿ ಹಾಗೂ ಆರ್.ಆರ್. ಸ್ಕ್ರ್ಯಾಪ್ ಮಾಲಕ ಎಸ್.ಎ. […]

News

ನವುಂಡ ಪರಿಸರದಲ್ಲಿ ಚಿರತೆಗಳ ಓಡಾಟ – ನಾಯಿಯ ಮೇಲೆ ದಾಳಿ, ಅರಣ್ಯ ಇಲಾಖೆ ಬೋನು ಅಳವಡಿಕೆ

ಮಡಂತ್ಯಾರು ಇಲ್ಲಿನ ಮಾಲಾಡಿ ಗ್ರಾಮದ ಅಂತರ ನವುಂಡ ದೇವಸ್ಥಾನದ ಸಮೀಪದ ರಸ್ತೆಯಲ್ಲಿ ಜನವರಿ 20ರಂದು ಮಂಗಳವಾರ ರಾತ್ರಿ ಎರಡು ಚಿರತೆಗಳು ಕಾಣಿಸಿಕೊಂಡು ನಾಯಿಯೊಂದರ ಮೇಲೆ ದಾಳಿ ನಡೆಸಿ ಹೊತ್ತೊಯ್ದ ಘಟನೆ ನಡೆದಿದೆ. ಸ್ಥಳೀಯರೊಬ್ಬರು ರಾತ್ರಿ ತನ್ನ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ, ರಸ್ತೆಯ ಬದಿಯಲ್ಲಿ ದಾರಿಹೋಕರಿಗೆ ಹೊಂಚು ಹಾಕುತ್ತಿದ್ದ ಚಿರತೆಗಳನ್ನು ಗಮನಿಸಿ ತಕ್ಷಣ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಕೂಡಲೇ ಅರಣ್ಯಾಧಿಕಾರಿಗಳು ರಾತ್ರಿ ವೇಳೆಯಲ್ಲೇ ಚಿರತೆ ಓಡಾಟ ಕಂಡುಬಂದ ಸ್ಥಳಕ್ಕೆ ಭೇಟಿ ನೀಡಿ […]

News

ಕಾಜೂರು ಉರೂಸ್ ಸಂಭ್ರಮ: ಪ್ರತಿದಿನ ವಿಭಿನ್ನ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನ

ಸುಮಾರು ಎಂಟು ಶತಮಾನಗಳಿಗೂ ಅಧಿಕ ಇತಿಹಾಸ ಹೊಂದಿರುವ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಖ್ಯಾತಿ ಪಡೆದ ಸರ್ವಧರ್ಮೀಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್ ಇಲ್ಲಿ ಜನವರಿ 16ರಿಂದ ಆರಂಭಗೊಂಡ ಉರೂಸ್ ಸಂಭ್ರಮದ ಅಂಗವಾಗಿ ಪ್ರತಿದಿನ ವಿಭಿನ್ನ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನಡೆಯುತ್ತಿವೆ. ಉರೂಸ್ ಅಂಗವಾಗಿ ಜನವರಿ 16ರಂದು ಸಯ್ಯಿದ್ ಕಾಜೂರು ತಂಙಳ್ ಉಪನ್ಯಾಸ ಮಾಲಿಕೆಗೆ ಶುಭಾರಂಭಗೊಳಿಸಿದರು. ಜನವರಿ 17ರಂದು ಸಯ್ಯಿದ್ ಕಿಲ್ಲೂರು ತಂಙಳ್ ಉಪನ್ಯಾಸ ನೀಡಿದರೆ, ಜನವರಿ 18ರಂದು ಲತೀಫ್ ಸಖಾಫಿ ಕಾಂತಪುರಂ ನೇತೃತ್ವದಲ್ಲಿ ಮದನಿಯಂ […]

News

ರಿಶೆಲ್ ಡಿಸೋಜ ಆತ್ಮಹತ್ಯೆ ಪ್ರಕರಣ : ತನಿಖಾ ನಿರ್ಲಕ್ಷ್ಯ ಆರೋಪ

ಕದ್ರಾ ಪಿಎಸ್‌ಐ ಸುನೀಲ್ ಬಂಡಿವಡ್ಡರ್ ಅಮಾನತು ಕಾರವಾರ ತಾಲೂಕಿನ ಕದ್ರಾ ನಿವಾಸಿ ಯುವತಿ ರಿಶೆಲ್ ಡಿಸೋಜಾ ಆತ್ಮಹತ್ಯೆ ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ ಕದ್ರಾ ಪೊಲೀಸ್ ಠಾಣೆಯ ಪಿಎಸ್‌ಐ ಸುನೀಲ್ ಬಂಡಿವಡ್ಡರ್ ಅವರನ್ನು ಅಮಾನತುಗೊಳಿಸಲಾಗಿದೆ. ಪ್ರಕರಣವು ರಾಜಕೀಯ ಹಾಗೂ ಸಾಮಾಜಿಕವಾಗಿ ಗಂಭೀರ ತಿರುವು ಪಡೆದುಕೊಂಡ ಬೆನ್ನಲ್ಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಕದ್ರಾ ನಿವಾಸಿಗಳಾದ ರೀನಾ ಹಾಗೂ ಕ್ರೀಸ್ತೋದ್ ಡಿಸೋಜ ದಂಪತಿಯ ಪುತ್ರಿ ರಿಶೆಲ್ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಾವಿಗೆ […]

News

“ವಿಟ್ಲ ಠಾಣೆಗೆ ಪ್ರಕಾಶ್ ದೇವಾಡಿಗ ಆಗಮನದ ಬಳಿಕ ಭಯರಹಿತ ವಾತಾವರಣ – ದಕ್ಷ, ಪ್ರಾಮಾಣಿಕ ಪೊಲೀಸ್ ಅಧಿಕಾರಿಗೆ ಐಕ್ಯ ವೇದಿಕೆಯಿಂದ ಸನ್ಮಾನ”

“ಶಾಂತಿ–ಸೌಹಾರ್ದತೆಯ ಸಂಕೇತವಾದ ಪೊಲೀಸ್ ಅಧಿಕಾರಿ ವಿಟ್ಲ ಪೊಲೀಸ್ ಠಾಣಾ ನಿರೀಕ್ಷಕರಾಗಿ ಕರ್ತವ್ಯ ಸ್ವೀಕರಿಸಿದ ಬಳಿಕ ದಕ್ಷತೆ, ಪ್ರಾಮಾಣಿಕತೆ ಹಾಗೂ ಜನಸ್ನೇಹಿ ನಡೆ ಮೂಲಕ ಸಾರ್ವಜನಿಕರ ವಿಶ್ವಾಸ ಗಳಿಸಿರುವ ಪೊಲೀಸ್ ಅಧಿಕಾರಿ ಪ್ರಕಾಶ್ ದೇವಾಡಿಗ ಅವರಿಗೆ ಐಕ್ಯ ವೇದಿಕೆ (ರಿ.) ಕೊಡಾಜೆಯ ನೂತನ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಜನವರಿ 18ರಂದು ಭಾನುವಾರ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಕಾಶ್ ದೇವಾಡಿಗ ಅವರು, ಕಳೆದ ಎರಡು ವರ್ಷಗಳಿಂದ ಸಮಾಜದಲ್ಲಿ ಶಾಂತಿ–ಸೌಹಾರ್ದತೆಯ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಐಕ್ಯ ವೇದಿಕೆ ನಿರಂತರವಾಗಿ […]

News

ಮಾಣಿ ಗ್ರಾಮದಲ್ಲಿ ‘ಸಮುದಾಯದತ್ತ ಸಾಂತ್ವನ ಅಭಿಯಾನ’

ಕಸಮುಕ್ತ, ನಶೆಮುಕ್ತ, ಹಿಂಸಾಮುಕ್ತ ಮಾದರಿ ಗ್ರಾಮ ನಿರ್ಮಾಣಕ್ಕೆ ಸ್ವಚ್ಛತಾ ಕಾರ್ಯಚರಣೆ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ನೇತೃತ್ವ ಮಾಣಿ ಗ್ರಾಮ ಪಂಚಾಯತ್, ಜನ ಶಿಕ್ಷಣ ಟ್ರಸ್ಟ್, ಮಹಿಳಾ ಸಾಂತ್ವನ ಕೇಂದ್ರ ಬಂಟ್ವಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಾಣಿಕ್ಯ ಸಂಜೀವಿನಿ ಒಕ್ಕೂಟ ಹಾಗೂ ವಿವಿಧ ಸಂಘ–ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಸಮುದಾಯದತ್ತ ಸಾಂತ್ವನ ಅಭಿಯಾನದ ಅಂಗವಾಗಿ ಕಸಮುಕ್ತ, ನಶೆಮುಕ್ತ ಹಾಗೂ ಹಿಂಸಾಮುಕ್ತ ಮಾದರಿ ಗ್ರಾಮ ನಿರ್ಮಾಣದ ಉದ್ದೇಶದಿಂದ ಸ್ವಚ್ಛ ಮನೆ ಸ್ವಯಂ ಘೋಷಣೆ – ಸ್ವಚ್ಛತಾ ಕಾರ್ಯಚರಣೆ […]

News

ಕೊನೆಯ ಪೆಡ್ಲರ್ ಬಂಧನವಾಗುವವರೆಗೂ ಡ್ರಗ್ಸ್ ಮುಕ್ತ ಕಾರ್ಯಾಚರಣೆ ಮುಂದುವರಿಕೆ – ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ

ಡ್ರಗ್ಸ್, ಗಾಂಜಾ ಸೇರಿದಂತೆ ಎಲ್ಲಾ ಮಾದಕ ವಸ್ತುಗಳ ಪೆಡ್ಲರ್‌ಗಳ ವಿರುದ್ಧ ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸಿ, ಕೊನೆಯ ಪೆಡ್ಲರ್ ಬಂಧನವಾಗುವವರೆಗೂ ಡ್ರಗ್ಸ್ ಮುಕ್ತ ಅಭಿಯಾನವನ್ನು ನಿರಂತರವಾಗಿ ಮುಂದುವರಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ತಿಳಿಸಿದ್ದಾರೆ. ಅವರು ನಗರದ ಪುರಭವನದಲ್ಲಿ ಡ್ರಗ್ಸ್ ಹಾಗೂ ಮಾದಕ ವಸ್ತುಗಳ ಜಾಗೃತಿ ಹಿನ್ನೆಲೆಯಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿ ಡ್ರಗ್ಸ್ ವಿತರಣಾ ಜಾಲವನ್ನು ಸಂಪೂರ್ಣವಾಗಿ ನಿಲ್ಲಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ ಎಂದು ಹೇಳಿದರು. […]

News

Konkani Lekhak Sangh Karnataka Announces Konkani Literary Award 2026 for Writer M. Patrik

Konkani Lekhak Sangh Karnataka, a voluntary organisation established in 2018 with the objective of promoting the Konkani language and literature, has announced its Konkani Literary Award for the year 2026. The award will be conferred on eminent Konkani writer Mr. Patrick Camille Moras, popularly known by his pen name M. Patrik, in recognition of his […]

You cannot copy content of this page