Home ಮುಖಪುಟ

Category: <span>ಮುಖಪುಟ</span>

Post
ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಎಂ ರಘುಪತಿ ನಿಧನ

ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಎಂ ರಘುಪತಿ ನಿಧನ

ಬೆಂಗಳೂರು: ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಎಂ. ರಘುಪತಿ ಇಂದು ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊಂಚ ಗುಣಮುಖರಾಗಿ ನಿವಾಸಕ್ಕೆ ಹಿಂದಿರುಗಿದ್ದ ಅವರು ಇಂದು ಬೆಳಗಿನ ಜಾವ 3 ಗಂಟೆಗೆ ತಮ್ಮ ಮಲ್ಲೇಶ್ವರದ ನಿವಾಸದಲ್ಲಿ ನಿಧನರಾಗಿದ್ದಾರೆ. ಇಂದು ಮಲ್ಲೇಶ್ವರಂನ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಸಾರ್ವಜನಿಕ ವ್ಯವಸ್ಥೆಯನ್ನು ಮಾಡಲಾಗಿದೆ. ಭಾನುವಾರ ಬೆಳಗ್ಗೆ ಅಂತಿಮ ವಿಧಿವಿಧಾನ ನಡೆಯಲಿದೆ. ಎಂ. ರಘುಪತಿ ಅಗಲಿಕೆಗೆ ರಾಜಕೀಯ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. ಇವರ...

Post
ನಾಳೆ ದ್ವಿತೀಯ PU ಪರೀಕ್ಷೆ ಫಲಿತಾಂಶ ಪ್ರಕಟ – ಸಚಿವ ಬಿ.ಸಿ ನಾಗೇಶ್ ಘೋಷಣೆ

ನಾಳೆ ದ್ವಿತೀಯ PU ಪರೀಕ್ಷೆ ಫಲಿತಾಂಶ ಪ್ರಕಟ – ಸಚಿವ ಬಿ.ಸಿ ನಾಗೇಶ್ ಘೋಷಣೆ

ಬೆಂಗಳೂರು: ಏಪ್ರಿಲ್ 22 ರಿಂದ ಆರಂಭವಾಗಿ ಮೇ 18ರವರೆಗೆ ನಡೆದಿದ್ದಂತ ದ್ವಿತೀಯ ಪಿಯುಸಿ ಪರೀಕ್ಷೆಯ  ಫಲಿತಾಂಶವನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಲಾಗುತ್ತಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಘೋಷಿಸಿದ್ದಾರೆ. ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭಾಶಯಗಳು ಎಂಬುದಾಗಿ ತಿಳಿಸಿದ್ದಾರೆ. ಅಂದಹಾಗೆ ದ್ವಿತೀಯ ಪಿಯುಸಿ 2021-22ನೇಸಾಲಿನ ಫಲಿತಾಂಶವನ್ನು ಜೂನ್‌ 25 ರೊಳಗೆ ಪ್ರಕಟಿಸೋದಾಗಿ ಹೇಳಿತ್ತು. ಇದೀಗ...

Post
ಮಂಗಳೂರು: ರಾಹುಲ್‌ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ

ಮಂಗಳೂರು: ರಾಹುಲ್‌ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ

ಮಂಗಳೂರು: ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಇಡಿ ವಿಚಾರಣೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಮುಖಂಡರು ನಗರದ ಫಳ್ನೀರ್‌ನ ಎಸ್‌ಎಲ್‌ ಮಥಾಯಿಸ್‌ ಪಾರ್ಕ್‌ನಿಂದ ಅತ್ತಾವರದ ಇಡಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮಾಜಿ ಸಚಿವ ರಮಾನಾಥ್ ರೈ, ಐವಾನ್ ಡಿಸೋಜಾ, ಹರೀಶ್‌ ಕುಮಾರ್‌ ಮುಂತಾದ ಮುಖಂಡರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಪ್ರತಿಭಟನಾ ನಿರತ ಮುಖಂಡರು ಹಾಗೂ ಕಾರ್ಯಕರ್ತ ಕೇಂದ್ರ ಸರ್ಕಾರ...

Post
ಅಗ್ನಿಪಥ್ ಮೂಲಕ ಸೇನೆಯಲ್ಲಿ ಕಾಲ್ಪನಿಕ ಹುದ್ದೆ, ರಾಜಕೀಯ ಲಾಭಕ್ಕೆ ಯೋಧರ ತ್ಯಾಗ ದುರ್ಬಳಕೆ

ಅಗ್ನಿಪಥ್ ಮೂಲಕ ಸೇನೆಯಲ್ಲಿ ಕಾಲ್ಪನಿಕ ಹುದ್ದೆ, ರಾಜಕೀಯ ಲಾಭಕ್ಕೆ ಯೋಧರ ತ್ಯಾಗ ದುರ್ಬಳಕೆ

ಬೆಂಗಳೂರು: ಸಾರ್ವತ್ರಿಕ ಚುನಾವಣೆ ಹತ್ತಿರವಿರುವುದರಿಂದ ಮತ್ತೊಂದು ನಾಟಕಕ್ಕೆ ತಾಲೀಮು ನಡೆಸುತ್ತಿದ್ದಾರೆ. ತಮ್ಮ ರಾಜಕೀಯ ಲಾಭಕ್ಕೆ ಯೋಧರ ತ್ಯಾಗವನ್ನು ದುರ್ಬಳಕೆ ಮಾಡಿಕೊಳ್ಳುತಿದ್ದು ಅಗ್ನಿಪಥ್ ಯೋಜನೆ ಮೂಲಕ ಸೇನೆಯಲ್ಲಿ ಕಾಲ್ಪನಿಕ ಹುದ್ದೆ ಸೃಷ್ಟಿಸುವುದು ಈ ನಾಟಕದ ಒಂದು ಭಾಗ ಎಂದು ದಿನೇಶ್ ಗುಂಡುರಾವ್ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಸೇನೆಯ ಅಲ್ಪಾವಧಿ ನೇಮಕ ಯೋಜನೆ ‘ಅಗ್ನಿಪಥ್’ ವಿರುದ್ಧ ದೇಶಾದ್ಯಂತ ಯುವಕರ ಆಕ್ರೋಶ ಭುಗಿಲೆದ್ದಿದೆ. ಯುವಕರ ಆಕ್ರೋಶ ಸಹಜವಾದದ್ದೆ.ಕಳೆದ ಎರಡು ವರ್ಷಗಳಿಂದ...

Post
ಚಾರ್ಮಾಡಿ: ಘಾಟ್‌ನಲ್ಲಿ ಗೂಡ್ಸ್ ವಾಹನ ಪಲ್ಟಿ- ಮೂವರು ಗಂಭೀರ

ಚಾರ್ಮಾಡಿ: ಘಾಟ್‌ನಲ್ಲಿ ಗೂಡ್ಸ್ ವಾಹನ ಪಲ್ಟಿ- ಮೂವರು ಗಂಭೀರ

ಮೂಡಿಗೆರೆ: ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಮಿನಿ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಗುರುವಾರ (ಜೂ.16) ಮುಂಜಾನೆ ನಡೆದಿದೆ. ಕೊಟ್ಟಿಗೆಹಾರದಿಂದ ಕೆಲಸಕ್ಕೆಂದು ಕರೆದುಕೊಂಡು ಹೋಗುತ್ತಿರುವ ವೇಳೆ ಅವಘಡ ಸಂಭವಿಸಿದ್ದು, ಈ ವೇಳೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಪ್ರಥಮ ಚಿಕಿತ್ಸೆ ಕೊಡಿಸಿ, ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳು ಉತ್ತರ ಪ್ರದೇಶದವರೆಂದು ತಿಳಿದು ಬಂದಿದೆ. ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Post
ಕಾಶ್ಮೀರಿ ಪಂಡಿತರದ್ದು ನರಮೇಧವಾದರೆ, ಜೈಶ್ರೀರಾಮ್ ಹೆಸರಲ್ಲಿ ಮುಸ್ಲಿಂರ ಮೇಲೆ ನಡಿತಿರೋದೇನು?: ನಟಿ ಸಾಯಿ ಪಲ್ಲವಿ

ಕಾಶ್ಮೀರಿ ಪಂಡಿತರದ್ದು ನರಮೇಧವಾದರೆ, ಜೈಶ್ರೀರಾಮ್ ಹೆಸರಲ್ಲಿ ಮುಸ್ಲಿಂರ ಮೇಲೆ ನಡಿತಿರೋದೇನು?: ನಟಿ ಸಾಯಿ ಪಲ್ಲವಿ

ನವದೆಹಲಿ: ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿರುವ ನಟಿ ಸಾಯಿ ಪಲ್ಲವಿ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಇತ್ತೀಚಿಗೆ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲಾದ ಹಲ್ಲೆಯನ್ನು ಹೋಲಿಸಿ ಯಾರನ್ನೂ ಧರ್ಮದ ಹೆಸರಲ್ಲಿ ಹಿಂಸಿಸಬಾರದೆಂದಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಸಾಯಿಪಲ್ಲವಿ ಅವರು ‘ಆ ಸಮಯದಲ್ಲಿ ಕಾಶ್ಮೀರಿ ಪಂಡಿತರನ್ನು ಹೇಗೆ ಕೊಲ್ಲಲಾಯಿತು ಎಂಬುದನ್ನು ಕಾಶ್ಮೀರಿ ಫೈಲ್ಸ್ ಸಿನಿಮಾದಲ್ಲಿ ತೋರಿಸಲಾಗಿದೆ. ನೀವು ಈ ವಿಷಯವನ್ನು ಧಾರ್ಮಿಕ ಸಂಘರ್ಷ ಎಂದು ಪರಿಗಣಿಸುತ್ತಿದ್ದರೆ, ಇತ್ತೀಚೆಗೆ ಗೋವುಗಳನ್ನು ಸಾಗಿಸುತ್ತಿದ್ದ ಮುಸ್ಲಿಂ ಚಾಲಕನನ್ನು ಥಳಿಸಿ ‘ಜೈ ಶ್ರೀ ರಾಮ್’ ಎಂದು...

Post
ಬಿಜೆಪಿಗೆ ರಾಹುಲ್‌ ಗಾಂಧಿಯ ಭಯ: ಯು.ಟಿ.ಖಾದರ್‌

ಬಿಜೆಪಿಗೆ ರಾಹುಲ್‌ ಗಾಂಧಿಯ ಭಯ: ಯು.ಟಿ.ಖಾದರ್‌

ಮಂಗಳೂರು: ‘ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಕಠಿಣ ಶ್ರಮ, ವಿಚಾರ ಬದ್ಧತೆ, ಸಂವಿಧಾನ ಪ್ರೀತಿ, ದೂರದರ್ಶಿತ್ವ ಹಾಗೂ ಸಂವಹನ ಕೌಶಲಗಳನ್ನು ಕಂಡು ಬಿಜೆಪಿ ಭಯ ಬಿದ್ದಿದೆ. ಹಾಗಾಗಿ ಜಾರಿ ನಿರ್ದೇಶನಾಲಯದಿಂದ ನೋಟಿಸ್‌ ಕಳುಹಿಸಿ ವಿಚಾರಣೆಗೆ ಒಳಪಡಿಸುವ ಮೂಲಕ ಅವರ ವ್ಯಕ್ತಿತ್ವಕ್ಕೆ ಕಳಂಕ ಹಚ್ಚುವ ಪ್ರಯತ್ನ ನಡೆಸಿದೆ’ ಎಂದು ವಿಧಾನ ಸಭೆಯಲ್ಲಿ ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್‌ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಬುಧವಾರ ಇಲ್ಲಿ ಮಾತನಾಡಿದ ಅವರು, ‘ರಾಹುಲ್‌ ಗಾಂಧಿ ಬಗ್ಗೆ ಬಿಜೆಪಿ ಎಷ್ಟೇ ಅಪಪ್ರಚಾರ ಮಾಡಿದರೂ ರಾಹುಲ್‌...

Post
ಪುತ್ತೂರು: ಮಹಿಳೆಯ ಮೇಲೆ ಅತ್ಯಾಚಾರ : ವೀಡಿಯೋ ಮಾಡಿ ಮಹಿಳೆಯ ಪತಿಗೆ ಕಳುಹಿಸಿದ ಆರೋಪಿ

ಪುತ್ತೂರು: ಮಹಿಳೆಯ ಮೇಲೆ ಅತ್ಯಾಚಾರ : ವೀಡಿಯೋ ಮಾಡಿ ಮಹಿಳೆಯ ಪತಿಗೆ ಕಳುಹಿಸಿದ ಆರೋಪಿ

ಪುತ್ತೂರು: ಕೋಳಿ ಫಾರ್ಮ್‌ನಲ್ಲಿ ಕೆಲಸಕ್ಕಿದ್ದ ಮಹಿಳೆಯ ಮೇಲೆ ಫಾರ್ಮಿನ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ವ್ಯಕ್ತಿಯೋರ್ವ ಅತ್ಯಾಚಾರಗೈದಿದ್ದಲ್ಲದೆ ವಿಡಿಯೋ ಚಿತ್ರೀಕರಿಸಿ ಬೆದರಿಕೆಯೊಡ್ಡಿರುವ ಬಗ್ಗೆ ಸಂಪ್ಯ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ. ಠಾಣಾ ವ್ಯಾಪ್ತಿಯ ಅರಿಯಡ್ಕ ಗ್ರಾಮದ ಮಡ್ಯಂಗಳ ಎಂಬಲ್ಲಿರುವ ಕೋಳಿ ಫಾರ್ಮ್‌ವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಮ್ಮರ್ ಎಂಬಾತ ಅಲ್ಲೇ ಕೆಲಸಕ್ಕೆ ಬರುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರಗೈದ ಬಳಿಕ ವಿಡಿಯೋ ಚಿತ್ರಿಕರಿಸಿ ಮಹಿಳೆಯ ಪತಿಗೆ ಕಳುಹಿಸಿದ್ದಾನೆ ಎನ್ನಲಾಗಿದೆ. ಮೇ 5 ರಂದು ಕೃತ್ಯ ನಡೆದಿದ್ದು, ಆರೋಪಿಯು ಜೀವ ಬೆದರಿಕೆ ಹಾಕಿದ್ದ ಕಾರಣ ಮಂಗಳವಾರದಂದು...

Post
ಪ್ರವಾದಿ ನಿಂದನೆ‌ : ಬಿಜೆಪಿಗೆ ರಾಜೀನಾಮೆ‌ ನೀಡಿದ ಕೌನ್ಸಿಲರ್

ಪ್ರವಾದಿ ನಿಂದನೆ‌ : ಬಿಜೆಪಿಗೆ ರಾಜೀನಾಮೆ‌ ನೀಡಿದ ಕೌನ್ಸಿಲರ್

ರಾಜಸ್ಥಾನ:ಟಿವಿ ಚರ್ಚೆಯಲ್ಲಿ ಪ್ರವಾದಿ ಮೊಹಮ್ಮದ್ ಕುರಿತು ಬಿಜೆಪಿ ಉಚ್ಛಾಟಿತ ನಾಯಕಿ ನೂಪುರ್ ಶರ್ಮಾ ಮಾಡಿದ ನಿಂದನೆ‌ ವಿರೋಧಿಸಿ ರಾಜಸ್ಥಾನದ ಬಿಜೆಪಿ ಕೌನ್ಸಿಲರ್ ಸೋಮವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ದಕ್ಷಿಣದ ಕೋಟಾ ಮುನ್ಸಿಪಲ್ ಕಾರ್ಪೋರೇಶನ್‌ನ ವಾರ್ಡ್ ಸಂಖ್ಯೆ 14 ರ ಬಿಜೆಪಿಯ ಪುರಸಭೆ ಸದಸ್ಯೆ ತಬಸ್ಸುಮ್ ಮಿರ್ಜಾ ಅವರು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಸತೀಶ್ ಪೂನಿಯಾ ಮತ್ತು ಕೋಟಾ ಜಿಲ್ಲಾ ಅಧ್ಯಕ್ಷ ಕ್ರಿಶನ್ ಕುಮಾರ್ ಸೋನಿ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ರಾಜೀನಾಮೆ ಹಿಂದಿನ ಕಾರಣವನ್ನು ಉಲ್ಲೇಖಿಸಿರುವ...

Post
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಮಟ್ಟದ ನವ ಸಂಕಲ್ಪ ಶಿಬಿರಕ್ಕೆ ಚಾಲನೆ

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಮಟ್ಟದ ನವ ಸಂಕಲ್ಪ ಶಿಬಿರಕ್ಕೆ ಚಾಲನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಮಟ್ಟದ ನವ ಸಂಕಲ್ಪ ಶಿಬಿರಕ್ಕೆ ಚಾಲನೆ ನೀಡಲಾಯಿತು. ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುತ್ತಿರುವ ಶಿಬಿರದಲ್ಲಿ ಪಕ್ಷ ಸಂಘಟನೆ, ಚುನಾವಣಾ ತಂತ್ರಗಾರಿಕೆ ಹಾಗೂ ಸರ್ಕಾರದ ವೈಫಲ್ಯಗಳು ಸೇರಿದಂತೆ ಮಹತ್ತರ ವಿಷಯಗಳ ಬಗ್ಗೆ ಚರ್ಚೆ ನಡೆಯಿತು . ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್,ವಿಧಾನ ಪರಿಷತ್ ವಿಪಕ್ಷ ನಾಯಕರಾದ ಬಿ.ಕೆ ಹರಿಪ್ರಸಾದ್,ವಿಧಾನಸಭೆ ಉಪನಾಯಕರಾದ ಯುಟಿ ಖಾದರ್,ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್,ಮಾಜಿ ಸಚಿವರಾದ ಬಿ ರಮಾನಾಥ ರೈ ,ಕೆ.ಪಿ.ಸಿ.ಸಿ ಉಪಾಧ್ಯಕ್ಷರಾದ...