ಮಂಗಳೂರು: ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಇಡಿ ವಿಚಾರಣೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಮುಖಂಡರು ನಗರದ ಫಳ್ನೀರ್ನ ಎಸ್ಎಲ್ ಮಥಾಯಿಸ್ ಪಾರ್ಕ್ನಿಂದ ಅತ್ತಾವರದ ಇಡಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮಾಜಿ ಸಚಿವ ರಮಾನಾಥ್ ರೈ, ಐವಾನ್ ಡಿಸೋಜಾ, ಹರೀಶ್ ಕುಮಾರ್ ಮುಂತಾದ ಮುಖಂಡರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಪ್ರತಿಭಟನಾ ನಿರತ ಮುಖಂಡರು ಹಾಗೂ ಕಾರ್ಯಕರ್ತ ಕೇಂದ್ರ ಸರ್ಕಾರ...
FlashNews:
ಕಾರ್ಕಳ: ಜೀಪ್ ಪಲ್ಟಿ- ಯುವತಿ ಮೃತ್ಯು, ಮೂವರಿಗೆ ಗಂಭೀರ ಗಾಯ
ಮಂಗಳೂರು: ‘ಅಗ್ನಿಪಥ್’ ನಿಂದ ಯುವಕರಿಗೆ ವಂಚನೆ; ಯುವ ಕಾಂಗ್ರೆಸ್ ಪ್ರತಿಭಟನೆ
ಧರ್ಮಸ್ಥಳದಿಂದ ದರ್ಶನ ಮುಗಿಸಿ ಬರುವ ವೇಳೆ ಮರಕ್ಕೆ ಢಿಕ್ಕಿ ಹೊಡೆದ ಕಾರು: ತಂದೆ-ಮಗ ಸಾವು
ಪುತ್ತೂರು ಅರಣ್ಯ ಇಲಾಖೆ ಮಿಂಚಿನ ಕಾರ್ಯಾಚರಣೆ: ದಂತಚೋರರ ಬಂಧನ
ಮೋದಿ ಬಂದು ಹೋಗಲಿ ಬೇಡ ಅಂದವರ್ಯಾರು.? ಆದ್ರೇ ಕಾಲೇಜುಗಳಿಗೆ ರಜೆ ಯಾಕೆ.? ವಿದ್ಯಾರ್ಥಿಗಳೇನು ಟೆರರಿಸ್ಟ್ ಗಳಾ ? – ಡಿಕೆಶಿ ಕಿಡಿ
ಇಂದು ರಾಹುಲ್ ಗಾಂಧಿ ಹುಟ್ಟುಹಬ್ಬ: ಸಂಭ್ರಮಿಸದಂತೆ ಕಾರ್ಯಕರ್ತರಿಗೆ ಕರೆ
ಬೆಳಗಾವಿಯಲ್ಲಿ ಪಾರ್ಕಿಂಗ್ ಗಲಾಟೆ ಕೊಲೆಯಲ್ಲಿ ಅಂತ್ಯ-ವಾಹನಗಳಿಗೆ ಬೆಂಕಿ, ಉದ್ವಿಗ್ನ ಪರಿಸ್ಥಿತಿ
ದ್ವಿತೀಯ PUC ಪರೀಕ್ಷೆಯಲ್ಲಿ ಅನುತ್ತೀರ್ಣ: ರಾಜ್ಯಾದ್ಯಂತ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ..!
Big Breaking: ಬೆಂಗಳೂರಿನಲ್ಲಿ ಸಹ ನಟನ ಬರ್ಬರ ಕೊಲೆ
ದಕ ಜಿಲ್ಲಾ ಪಂಚಾಯತ್ ಎಡವಟ್ಟು -ಗ್ರಾಮ ಪಂಚಾಯಿತಿ ಸಿಬ್ಬಂದಿ ಗಳಿಗೆ ಭವಿಷ್ಯ ನಿಧಿ ಯೋಜನೆ ತಪ್ಪುಅದೇಶ
ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಎಂ ರಘುಪತಿ ನಿಧನ
ಬಂಟ್ವಾಳ: ಬೈಕ್ ನಲ್ಲಿ ಬಂದು ವೃದ್ದೆಯ ಸರ ದೋಚಿದ್ದ ಆರೋಪಿ ಸೆರೆ
ನಾಳೆ ದ್ವಿತೀಯ PU ಪರೀಕ್ಷೆ ಫಲಿತಾಂಶ ಪ್ರಕಟ – ಸಚಿವ ಬಿ.ಸಿ ನಾಗೇಶ್ ಘೋಷಣೆ
ಮಂಗಳೂರು: ರಾಹುಲ್ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ
ಅಗ್ನಿಪಥ್ ಮೂಲಕ ಸೇನೆಯಲ್ಲಿ ಕಾಲ್ಪನಿಕ ಹುದ್ದೆ, ರಾಜಕೀಯ ಲಾಭಕ್ಕೆ ಯೋಧರ ತ್ಯಾಗ ದುರ್ಬಳಕೆ
BIG NEWS: ಸೋನಿಯಾ ಗಾಂಧಿ ಮಾತ್ರವಲ್ಲ, BSY, ಬಿ.ವೈ ವಿಜಯೇಂದ್ರ ಕೂಡ ಜೈಲಿಗೆ ಹೋಗ್ತಾರೆ : ಶಾಸಕ ಯತ್ನಾಳ್ ಹೊಸ ಬಾಂಬ್
ಮಂಗಳೂರು : ಬಿಬಿಎ ವಿದ್ಯಾರ್ಥಿ ನೇಣು ಬಿಗಿದು ಸಾವಿಗೆ ಶರಣು- ಆರ್ಥಿಕ ಸಂಕಷ್ಟಕ್ಕೆ ಬೆದರಿ ಸಾವು ಶಂಕೆ
ಮಂಗಳೂರು:”ಕುಳಾಯಿ ಫೌಂಡೇಶನ್” ನಿಂದ ಬಡಮಕ್ಕಳ ದತ್ತು ಸ್ವೀಕಾರ
ಮಂಗಳೂರು: ಬಾಲ್ಕನಿಯ ಕರ್ಟನ್ ಸರಿಪಡಿಸುವ ವೇಳೆ 5ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು
Category: <span>ರಾಜಕೀಯ</span>
ವಾಯವ್ಯ ಶಿಕ್ಷಕರ ಮತ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿಗೆ ಭರ್ಜರಿ ಗೆಲುವು
ಬೆಳಗಾವಿ: ವಾಯವ್ಯ ಶಿಕ್ಷಕರ ಮತ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ 5,091 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಅವರು ಎರಡನೇ ಸಲ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಬೆಳಗಾವಿ ನಗರದ ಜ್ಯೋತಿ ಪಿಯು ಕಾಲೇಜಿನಲ್ಲಿ ನಡೆಯುತ್ತಿರುವ ಮತ ಎಣಿಕೆ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಆರಂಭದಲ್ಲಿಯೇ ಮುನ್ನಡೆ ಕಾಯ್ದುಕೊಂಡು ಬಂದಿದ್ದರು. ಬಿಜೆಪಿ ಅಭ್ಯರ್ಥಿ ಅರುಣ ಶಹಾಪುರ 6,361 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ 11,452 ಮತಗಳನ್ನು ಪಡೆದುಕೊಂಡಿದ್ದಾರೆ. ವಾಯವ್ಯ ಶಿಕ್ಷಕರ...
ಬಿಜೆಪಿಗೆ ರಾಹುಲ್ ಗಾಂಧಿಯ ಭಯ: ಯು.ಟಿ.ಖಾದರ್
ಮಂಗಳೂರು: ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕಠಿಣ ಶ್ರಮ, ವಿಚಾರ ಬದ್ಧತೆ, ಸಂವಿಧಾನ ಪ್ರೀತಿ, ದೂರದರ್ಶಿತ್ವ ಹಾಗೂ ಸಂವಹನ ಕೌಶಲಗಳನ್ನು ಕಂಡು ಬಿಜೆಪಿ ಭಯ ಬಿದ್ದಿದೆ. ಹಾಗಾಗಿ ಜಾರಿ ನಿರ್ದೇಶನಾಲಯದಿಂದ ನೋಟಿಸ್ ಕಳುಹಿಸಿ ವಿಚಾರಣೆಗೆ ಒಳಪಡಿಸುವ ಮೂಲಕ ಅವರ ವ್ಯಕ್ತಿತ್ವಕ್ಕೆ ಕಳಂಕ ಹಚ್ಚುವ ಪ್ರಯತ್ನ ನಡೆಸಿದೆ’ ಎಂದು ವಿಧಾನ ಸಭೆಯಲ್ಲಿ ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಬುಧವಾರ ಇಲ್ಲಿ ಮಾತನಾಡಿದ ಅವರು, ‘ರಾಹುಲ್ ಗಾಂಧಿ ಬಗ್ಗೆ ಬಿಜೆಪಿ ಎಷ್ಟೇ ಅಪಪ್ರಚಾರ ಮಾಡಿದರೂ ರಾಹುಲ್...
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಮಟ್ಟದ ನವ ಸಂಕಲ್ಪ ಶಿಬಿರಕ್ಕೆ ಚಾಲನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಮಟ್ಟದ ನವ ಸಂಕಲ್ಪ ಶಿಬಿರಕ್ಕೆ ಚಾಲನೆ ನೀಡಲಾಯಿತು. ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುತ್ತಿರುವ ಶಿಬಿರದಲ್ಲಿ ಪಕ್ಷ ಸಂಘಟನೆ, ಚುನಾವಣಾ ತಂತ್ರಗಾರಿಕೆ ಹಾಗೂ ಸರ್ಕಾರದ ವೈಫಲ್ಯಗಳು ಸೇರಿದಂತೆ ಮಹತ್ತರ ವಿಷಯಗಳ ಬಗ್ಗೆ ಚರ್ಚೆ ನಡೆಯಿತು . ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್,ವಿಧಾನ ಪರಿಷತ್ ವಿಪಕ್ಷ ನಾಯಕರಾದ ಬಿ.ಕೆ ಹರಿಪ್ರಸಾದ್,ವಿಧಾನಸಭೆ ಉಪನಾಯಕರಾದ ಯುಟಿ ಖಾದರ್,ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್,ಮಾಜಿ ಸಚಿವರಾದ ಬಿ ರಮಾನಾಥ ರೈ ,ಕೆ.ಪಿ.ಸಿ.ಸಿ ಉಪಾಧ್ಯಕ್ಷರಾದ...
ವಿಟ್ಲ : ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳು ಹಾಗೂ ಪಕ್ಷದ ಪದಾಧಿಕಾರಿಗಳ ಸಮಾಲೋಚನಾ ಸಭೆ
ವಿಟ್ಲ: ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಕೊಳ್ನಾಡು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕೊಳ್ನಾಡು, ಕನ್ಯಾನ, ಕರೋಪಾಡಿ, ಸಾಲೆತ್ತೂರು, ಮಂಚಿ ಗ್ರಾ.ಪಂಚಾಯತ್ ಹಾಲಿ ಸದಸ್ಯರು, ಮಾಜಿ ಸದಸ್ಯರು, ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಜಿತರಾದ ಅಭ್ಯರ್ಥಿಗಳು, ವಲಯಾಧ್ಯಕ್ಷರುಗಳು, ಬೂತ್ ಅಧ್ಯಕ್ಷರುಗಳು, ವಿವಿಧ ಮುಂಚೂಣಿ ಘಟಕಗಳ ಕಾರ್ಯಕರ್ತರ ಸಂವಾದ ಕಾರ್ಯಕ್ರಮವು ಕೊಳ್ನಾಡು ಗ್ರಾಮದ ಕುಡ್ತಮುಗೇರು ವಿಜಯಶ್ರೀ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಜಿಲ್ಲಾ ಅದ್ಯಕ್ಷರಾದ ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಬಂಟ್ವಾಳ...
ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳು ಹಾಗೂ ಪಕ್ಷದ ಪದಾಧಿಕಾರಿಗಳ ಸಮಾಲೋಚನಾ ಸಭೆ
ಬಂಟ್ವಾಳ :ತಾಲೂಕಿನ ಗೋಳ್ತಮಜಲು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದ.ಕ.ಜಿಲ್ಲೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳು ಹಾಗೂ ಪಕ್ಷದ ಪದಾಧಿಕಾರಿಗಳ ಸಮಾಲೋಚನಾ ಸಭೆಯು ಕಲ್ಲಡ್ಕ ಕೆ. ಸಿ ರೋಡ್ ನಲ್ಲಿ ನಡೆಯಿತು. ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಹರೀಶ್ ಕುಮಾರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದ.ಕ.ಜಿಲ್ಲಾದ್ಯಕ್ಷ ಸುಭಾಶ್ಚಂದ್ರ...
ಬಂಟ್ವಾಳ: ಕಾವಳಕಟ್ಟೆಯಲ್ಲಿ ಚುನಾಯಿತ ಜನಪ್ರತಿನಿಧಿಗಳು ಹಾಗೂ ಪಕ್ಷದ ಪದಾಧಿಕಾರಿಗಳ ಸಮಾಲೋಚನಾ ಸಭೆ
ಬಂಟ್ವಾಳ: ಸರಪಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದ.ಕ.ಜಿಲ್ಲೆ,ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳು ಹಾಗೂ ಪಕ್ಷದ ಪದಾಧಿಕಾರಿಗಳ ಸಮಾಲೋಚನಾ ಸಭೆಯು ಕಾವಳಕಟ್ಟೆಯ ಕೊಡಾಮಣಿತ್ತಾಯ ದೈವಸ್ಥಾನ ಅನ್ನಪೂರ್ಣ ಹಾಲ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಹರೀಶ್ ಕುಮಾರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದ.ಕ.ಜಿಲ್ಲಾದ್ಯಕ್ಷ ಸುಭಾಶ್ಚಂದ್ರ ಶೆಟ್ಟಿ...
ವಿಟ್ಲ : ಮಾಣಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳು ಹಾಗೂ ಪಕ್ಷದ ಪದಾಧಿಕಾರಿಗಳ ಸಮಾಲೋಚನಾ ಸಭೆ
ವಿಟ್ಲ : ದ.ಕ.ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಣಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳು ಹಾಗೂ ಪಕ್ಷದ ಪದಾಧಿಕಾರಿಗಳ ಸಮಾಲೋಚನಾ ಸಭೆಯು ಮಂಗಳವಾರ ಮಾಣಿಯ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆಯಿತು. ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಹರೀಶ್ ಕುಮಾರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದ.ಕ.ಜಿಲ್ಲಾದ್ಯಕ್ಷ ಸುಭಾಶ್ಚಂದ್ರ...
ಕೇರಳದಲ್ಲಿ ಉಪ ಚುನಾವಣೆ: ಭಾರೀ ಅಂತರದಿಂದ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ಉಮಾ ಥಾಮಸ್
ತಿರುವನಂತಪುರ: ಕೇರಳದ ಎರ್ನಾಕುಲಂ ಜಿಲ್ಲೆಯ ತ್ರಿಕ್ಕಕರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಭಾರೀ ಅಂತರದಿಂದ ಗೆಲುವು ದಾಖಲಿಸಿರುವ ಕಾಂಗ್ರೆಸ್ ತನ್ನ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಉಮಾ ಥಾಮಸ್ ತನ್ನ ಸಮೀಪದ ಪ್ರತಿಸ್ಪರ್ಧಿ ಎಲ್ ಡಿಎಫ್ ಅಭ್ಯರ್ಥಿ ಡಾ.ಜೋ ಜೋಸೆಫ್ ಅವರನ್ನು 25,000ಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸಿದರು. ಕಾಂಗ್ರೆಸ್ ಶಾಸಕ ಪಿ.ಟಿ. ಥಾಮಸ್ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿದೆ. ದಿವಂಗತ ಶಾಸಕರ ಪತ್ನಿ ಉಮಾ ಥಾಮಸ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿತು. ಆಡಳಿತಾರೂಢ ಎಲ್...
BREAKING: ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಾ ರಾಮಯ್ಯ ನೇಮಕ
ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ನ ನಿಕಟಪೂರ್ವ ಅಧ್ಯಕ್ಷ ಆಗಿರುವಂತ ರಕ್ಷಾ ರಾಮಯ್ಯ ಅವರನ್ನು, ಇದೀಗ ಯುವ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈ ಬಗ್ಗೆ ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಅವರು ಆದೇಶ ಹೊರಡಿಸಿದ್ದು, ಈ ತಕ್ಷಣದಿಂದಲೇ ರಕ್ಷಾ ರಾಮಯ್ಯ ಅವರನ್ನು, ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಪಕ್ಷಕ್ಕೆ ನೀವು ಸಲ್ಲಿಸಿದಂತ ಸೇವೆ ಪರಿಗಣಿಸಿ, ಈ ಹುದ್ದೆ ನೀಡಲಾಗಿದೆ. ಪಕ್ಷ ಸಂಘಟನೆಯನ್ನು ಬಲಪಡಿಸುವ ಕೆಲಸ...