ಗ್ರಾಮ ಪಂಚಾಯತ್ ಅಧ್ಯಕ್ಷ –ಉಪಾಧ್ಯಕ್ಷ ಹುದ್ದೆಗೆ ಮೀಸಲಾತಿ ಯಲ್ಲಿ ಯಾವುದೇ ಲೋಪವಾಗದೆ ಪಾರದರ್ಶಕತೆಯಿಂದ ನಡೆಯಲಿ ಎಂದು ಜಿಲ್ಲಾ ಮಾಜಿ ಉಸ್ತುವಾರಿ ಸಚಿವರಾದ ರಮಾನಾಥ ರೈ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಿದ್ದು, ಜಿಲ್ಲಾಧಿಕಾರಿಗಳು ಕಾನೂನು ಪಾಲನೆಗೆ ಬದ್ಧ ಎಂದಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್, ಪಾಲಿಕೆ ವಿರೋಧ ಪಕ್ಷದ ನಾಯಕ ಅಬ್ದುಲ್ ರವೂಫ್, ಪಾಲಿಕೆ ಸದಸ್ಯ ಭಾಸ್ಕರ ಮೊಯಿಲಿ, ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬೇಬಿ ಕುಂದರ್, ಯಮ್ ಎಸ್ ಮಹಮ್ಮದ್, ಮಾಯಿಲಪ್ಪ ಸಾಲ್ಯಾನ್, ಚಂದ್ರಹಾಸ ಕರ್ಕೆರ, ಸುದೀಪ್ ಕುಮಾರ್ ಶೆಟ್ಟಿ, ಮಹಮ್ಮದ್ ಅಲಿ ಉಪಸ್ಥಿತರಿದ್ದರು.
Leave a Reply