ಹರಿಕೃಷ್ಣ ಬಂಟ್ವಾಳ ಬಂಧನಕ್ಕೆ ಒತ್ತಾಯಿಸಿ, ನಗರ ಪೊಲೀಸ್ ಠಾಣೆಯಲ್ಲಿ ದೂರು

ಬಿಜೆಪಿ ಪಕ್ಷದ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಬಿ . ರಮಾನಾಥ ರೈ ಯವರು ಶರತ್ ಮಡಿವಾಳ ನನ್ನು ಕೊಲೆ ಮಾಡಿದವರು ಎಂದು ನೇರ ಆರೋಪ ಮಾಡಿ ಸದ್ರಿ ಭಾಷಣದ ವೀಡಿಯೋವನ್ನು ಸಾಮಾಜಿಕ ಜಾಲತಾಣವಾದ “ ವಾಟ್ಸ್ಪ್ ” ” ಪೇಸ್‌ಬುಕ್ ” ನಲ್ಲಿ ಹರಿಬಿಟ್ಟು ಕೋಮು ಸಂಘರ್ಷ ಉಂಟಾಗುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹರಿಕೃಷ್ಣ ಬಂಟ್ವಾಳ ಇವರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಪಿರ್ಯಾದಿ .

ತಾಲೂಕು ಇರ್ವತ್ತೂರು ಗ್ರಾಮದ ತಾಲೂಕು ಪಂಚಾಯತ್ ಸದಸ್ಯರಾದ ರಮೇಶ್ ಕುಡುಮೇರು ಇವರ ಮನೆಯಲ್ಲಿ ಬಿಜೆಪಿ ಪಕ್ಷದ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಕಿಯೋನಿಕ್ಸ್ ನಿಗಮದ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ ಇವರು ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ಹಾಜರಿದ್ದ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು , ಬಿಜೆಪಿ ಪಕ್ಷದ ಜನಪ್ರತಿನಿಧಿಗಳು , ಮುಖಂಡರು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಹರಿಕೃಷ್ಣ ಬಂಟ್ವಾಳ ಇವರು ಭಾಷಣ ಮಾಡುವಾಗ ರಮಾನಾಥ ರೈ ಯವರು ಶರತ್ ಮಡಿವಾಳನನ್ನು ಕೊಲೆ ಮಾಡಿದವರು ಎಂದು ಕೊಲೆಗಾರನಂತೆ ಬಿಂಬಿಸಿ ಗಂಭೀರ ಆರೋಪವನ್ನು ಮಾಡಿ ಕೋಮು ಸಂಘರ್ಷ ಉಂಟಾಗುವ ರೀತಿಯಲ್ಲಿ ಸದ್ರಿ ಭಾಷಣವನ್ನು ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್ ಮತ್ತು ವಾಟ್ಸ್‌ಪ್ ನಲ್ಲಿ ಹರಿ ಬಿಟ್ಟಿದ್ದು , ಸಮಾಜದಲ್ಲಿ ಅಶಾಂತಿಯನ್ನು ಸೃಷ್ಟಿಸಿ ಕೋಮು ಸಂಘರ್ಷ ಉಂಟಾಗುವಂತೆ ಪ್ರಚೋದನಕಾರಿ ಭಾಷಣ ಮಾಡಿರುತ್ತಾರೆ ,ಹಾಗೆ ಇವರನ್ನು ಬಂಧಿಸಿ ವಿಚಾರಣೆ ಮಾಡಬೇಕೆಂದು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಬಂಟ್ವಾಳ ಕಾಂಗ್ರೆಸ್ ಮುಖಂಡರು ಪಾದಯಾತ್ರೆ ಮೂಲಕ ಠಾಣೆಗೆ ತೆರಳಿ ಮನವಿ ಮಾಡಿದ್ದಾರೆ.

Leave a Reply

Your email address will not be published.