ಇಂದು ರಾಹುಲ್ ಗಾಂಧಿ ಹುಟ್ಟುಹಬ್ಬ: ಸಂಭ್ರಮಿಸದಂತೆ ಕಾರ್ಯಕರ್ತರಿಗೆ ಕರೆ

ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು 53ನೇ ಹುಟ್ಟುಹಬ್ಬ ಸಂಭ್ರಮದಲ್ಲಿದ್ದಾರೆ.

ರಾಹುಲ್ ಗಾಂಧಿ ಹುಟ್ಟುಹಬ್ಬದ ಅಂಗವಾಗಿ ಕಾಂಗ್ರೆಸ್ ಮುಖಂಡರು ಸೇರಿದಂತೆ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಶುಭ ಹಾರೈಸಿದ್ದಾರೆ.

 

ದೇಶದ ರಕ್ಷಣಾ ಪಡೆಗಳಿಗೆ 4 ವರ್ಷಗಳ ಅಲ್ಪಾವಧಿ ನೇಮಕಾತಿಯ ‘ಅಗ್ನಿಪಥ’ ಯೋಜನೆ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದೆ. ಯುವ ಜನತೆ ಪ್ರತಿಭಟನೆಯಲ್ಲಿ ನಿರತರಾಗಿರುವ ಈ ಸಂದರ್ಭದಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸದಂತೆ ಪಕ್ಷದ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.

ನನ್ನ ಹುಟ್ಟುಹಬ್ಬದಂದು ಯಾವುದೇ ರೀತಿಯ ಆಚರಣೆಗಳನ್ನುನಡೆಸದಂತೆ ಪಕ್ಷದ ಕಾರ್ಯಕರ್ತರು ಹಾಗೂ ಹಿತೈಷಿಗಳಿಗೆ ಮನವಿ ಮಾಡುತ್ತೇನೆ ಎಂದು ರಾಹುಲ್ ಹೇಳಿದ್ದಾರೆ.

ಜೂನ್ 19,1970ರಂದು ಜನಿಸಿರುವ ರಾಹುಲ್ ಗಾಂಧಿ ಅವರು 4ನೇ ಅವಧಿಗೆ ಲೋಕಸಭಾ ಸಂಸದರಾಗಿದ್ದಾರೆ. ಅಮೇಠಿಯಿಂದ ಬಾರಿ(2004, 2009,2014)ಹಾಗೂ 2019ರಲ್ಲಿ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ.

ದಿಲ್ಲಿಯ ಜಂತರ್ ಮಂತರ್ ನಲ್ಲಿ ‘ಅಗ್ನಿಪಥ’ ಯೋಜನೆ ವಿರುದ್ಧ ಕಾಂಗ್ರೆಸ್ ರವಿವಾರ ಸತ್ಯಾಗ್ರಹ ನಡೆಸಲು ಉದ್ದೇಶಿಸಿದೆ.

‘ಅಗ್ನಿಪಥಯೋಜನೆ ವಿರೋಧಿಸಿ ದೇಶದ ಹಲವೆಡೆ ಪ್ರತಿಭಟನೆ ನಡೆದಿದೆ. ಕೆಲೆವಡೆ ಪ್ರತಿಭಟನೆ ಹಿಂಸಾಚಾರ ರೂಪ ಪಡೆದಿರುವುದು ವರದಿಯಾಗಿದೆ.

Leave a Reply

Your email address will not be published.