ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಹರ್ನಿಶಿ ದುಡಿದ ಕಾರ್ಯಕರ್ತರಿಗೆ, ಸ್ಪರ್ಧಿಸಿದ ಅಭ್ಯರ್ಥಿಗಳಿಗೆ, ಹಾಗೂ ವಿಜೇತರಿಗೆ
*ಅಭಿನಂದನಾ ಸಮಾರಂಭ*
ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎನ್ ಜಯಪ್ರಕಾಶ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಯು ಟಿ ಖಾದರ್, ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿ , ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ರಾದ ಐವಾನ್ ಡಿ ಸೋಜ ಹಾಗೂ ಸುಳ್ಯ ಬ್ಲಾಕ್ ಕೆಪಿಸಿಸಿ ಉಸ್ತುವಾರಿ ಕೃಷ್ಣಪ್ಪ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ , ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಮಾಜಿ ಕಾರ್ಯದರ್ಶಿ ಎಸ್ ಸಂಶುದ್ದೀನ್, ಕ.ಅ.ಸಾ.ಮತ್ತು ಸಂಸ್ಕೃತಿ ಅಕಾಡೆಮಿ ಮಾಜಿ ಅಧ್ಯಕ್ಷರಾದ ಪಿ ಸಿ ಜಯರಾಮ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಗೀತಾ ಕೋಲ್ಚಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶ್ರೀಮತಿ ಸರಸ್ವತಿ ಕಾಮತ್ , ರಾಜೀವಿ ರೈ ವೇದಿಕೆಯಲ್ಲಿದ್ದರು.
ಪಂಚಾಯತ್ ಸದಸ್ಯರಾಗಿ ಅಯ್ಕೆಯಾದವರನ್ನು ಅಭಿನಂದಿಸಲಾಯಿತು.
ಗ್ರಾಮ ಪಂಚಾಯತ್ ಚುನಾವಣೆಯ ಅಭ್ಯರ್ಥಿಗಳು, ವಿಜೇತರು, ಗ್ರಾಮ ಉಸ್ತುವಾರಿಗಳು ಹಾಗೂ ಪಕ್ಷದ ಪ್ರಮುಖ ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.
Leave a Reply