ಸುಳ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಪೂರ್ವಭಾವಿ-ಸಭೆ

ಸುಳ್ಯ ಬ್ಲಾಕ್ ವ್ಯಾಪ್ತಿಯ ಅಲೆಟ್ಟಿ, ಉಬರಡ್ಕ-ಮಿತ್ತೂರು, ನೆಲ್ಲೂರು-ಕೆಮ್ರಾಜೆ ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆ ಅರಂಬೂರು– ನಗರ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಂಶುದ್ಧೀನ್ ಅವರ ಮನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಯಪ್ರಕಾಶ್ ರೈ ಅಧ್ಯಕ್ಷತೆಯಲ್ಲಿ ನಡೆಯಿತು .

ಚುನಾವಣೆಯ ಸಿದ್ಧತೆ ಬಗ್ಗೆ ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಉಸ್ತುವಾರಿ ಐವನ್ ಡಿ ಸೋಜ ಮತ್ತು ಬ್ಲಾಕ್ ಉಸ್ತುವಾರಿ ಸದಾಶಿವ ಶೆಟ್ಟಿ ಸುರತ್ಕಲ್, ಕಾರ್ಯಕರ್ತರ ಅಭಿಪ್ರಾಯ ಪಡೆದು ಮಾಹಿತಿ ನೀಡಿದರು.

ಈ ಸಭೆಯಲ್ಲಿ ಕೆಪಿಸಿಸಿ ಉಸ್ತುವಾರಿ ನಂದಕುಮಾರ್, ಪಿ.ಸಿ.ಜಯರಾಮ, ಗೀತಾ ಕೋಲ್ಚಾರು,ಧರ್ಮಪಾಲ ,ಜಯರಾಮ ಬೆಟ್ಟ ಮತ್ತಿತರರು ಉಪಸ್ಥಿತರಿದ್ದರು

Leave a Reply

Your email address will not be published.